AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಬಾಝ್​ಬಾಲ್ ಬೆಂಡೆತ್ತಿದ ಜೈಸ್​ಬಾಲ್

Yashasvi Jaiswal Records: ಈ ಸರಣಿಯಲ್ಲಿ 712 ರನ್ ಕಲೆಹಾಕುವ ಮೂಲಕ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ 1000 ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ (Yashasvi Jaiswal) ಕೇವಲ 9 ಟೆಸ್ಟ್ ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದಾರೆ. ಇದರ ಜೊತೆಗೆ ಇನ್ನೂ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 10, 2024 | 10:31 AM

Share
ಬಾಝ್​ಬಾಲ್ ರಣತಂತ್ರದೊಂದಿಗೆ ಭಾರತಕ್ಕೆ ಬಂದ ಇಂಗ್ಲೆಂಡ್ ತಂಡವು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮಕಾಡೆ ಮಲಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಂಗ್ಲರು ಗೆದ್ದಿದ್ದು ಬಿಟ್ಟರೆ, ಇಡೀ ಟೂರ್ನಿಯಲ್ಲಿ ಟೀಮ್ ಇಂಡಿಯಾ (Team India) ಪಾರುಪತ್ಯ ಮೆರೆದಿದೆ. ಅದರಲ್ಲೂ ಇಂಗ್ಲೆಂಡ್ ತಂಡದ ಬಾಝ್​ಬಾಲ್​ಗೆ ಕೌಂಟರ್ ಅಟ್ಯಾಕ್ ನೀಡಿದ್ದು ಯಶಸ್ವಿ ಜೈಸ್ವಾಲ್ (Yashasvi Jaiswal) ಎಂದರೆ ತಪ್ಪಾಗಲಾರದು. ಇದಕ್ಕೆ ಸಾಕ್ಷಿಯೇ ಜೈಸ್ವಾಲ್ ಅವರ ಈ ಅಂಕಿ ಅಂಶಗಳು...

1 / 6
ಈ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು 22 ವರ್ಷದ ಯಶಸ್ವಿ ಜೈಸ್ವಾಲ್. 5 ಪಂದ್ಯಗಳಿಂದ ಬರೋಬ್ಬರಿ 712 ರನ್ ಕಲೆಹಾಕುವ ಮೂಲಕ ಯುವ ಎಡಗೈ ದಾಂಡಿಗ ಇತಿಹಾಸ ನಿರ್ಮಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಜೈಸ್ವಾಲ್ ಅವರನ್ನು ಹೊರತುಪಡಿಸಿದರೆ ಯಾವುದೇ ಬ್ಯಾಟರ್ 500 ರನ್​ಗಳನ್ನು ಕಲೆಹಾಕಿಲ್ಲ ಎಂಬುದು.

2 / 6
ಹಾಗೆಯೇ ಈ ಸರಣಿಯಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್​ ಗಳಿಸಿದ್ದು ಕೂಡ ಯಶಸ್ವಿ ಜೈಸ್ವಾಲ್. ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ ಅಜೇಯ 214 ರನ್ ಬಾರಿಸಿ ಮಿಂಚಿದ್ದರು.

3 / 6
ಇದಲ್ಲದೆ, ಈ ಸರಣಿಯಲ್ಲಿ ಅತೀ ಹೆಚ್ಚು ಬೌಂಡರಿಗಳನ್ನು ಸಿಡಿಸಿದ್ದು ಕೂಡ 22ರ ಹರೆಯದ ಯಶಸ್ವಿ ಜೈಸ್ವಾಲ್. 5 ಪಂದ್ಯಗಳಲ್ಲಿ ಜೈಸ್ವಾಲ್ ಬ್ಯಾಟ್​ನಿಂದ ಮೂಡಿಬಂದಿರುವುದು ಬರೋಬ್ಬರಿ 26 ಸಿಕ್ಸ್ ಹಾಗೂ 68 ಫೋರ್​ಗಳು.

4 / 6
ಈ ಸರಣಿಯಲ್ಲಿ 89 ಸರಾಸರಿಯಲ್ಲಿ ರನ್ ಕಲೆಹಾಕಿರುವ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 700+ ರನ್ ಕಲೆಹಾಕಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಹಾಗೆಯೇ ತಂಡವೊಂದರ ವಿರುದ್ಧ ಟೆಸ್ಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು.

5 / 6
ಹೀಗೆ ಪ್ರತಿ ಹಂತದಲ್ಲೂ ಇಂಗ್ಲೆಂಡ್ ಬೌಲರ್​ಗಳನ್ನು ಬೆಂಡೆತ್ತುವ ಮೂಲಕ ಯಶಸ್ವಿ ಜೈಸ್ವಾಲ್ ಬಾಝ್​ಬಾಲ್ ಕಲಿಗಳಿಗೆ ಜೈಸ್​ಬಾಲ್ ಆಟ ಹೇಗಿರುತ್ತೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ಮೂಲಕ 22ರ ಹರೆಯದಲ್ಲೇ ಅತಿರಥ ಮಹಾರಥರನ್ನು ಹಿಂದಿಕ್ಕಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?