James Anderson: ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್
James Anderson Record: ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ 700 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮೂಲಕ ಅ್ಯಂಡರ್ಸನ್ ಈ ಸಾಧನೆ ಮಾಡಿರುವುದು ವಿಶೇಷ. ಈ ಮೂಲಕ ಟೆಸ್ಟ್ನಲ್ಲಿ 700 ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.
Updated on:Mar 09, 2024 | 9:48 AM

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೆಸ್ಟ್ ಕ್ರಿಕೆಟ್ನಲ್ಲಿ ಬರೋಬ್ಬರಿ 700 ವಿಕೆಟ್ ಉರುಳಿಸುವ ಮೂಲಕ ಎಂಬುದು ವಿಶೇಷ.

ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ 700 ವಿಕೆಟ್ ಕಬಳಿಸಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್ನಲ್ಲಿ 700+ ವಿಕೆಟ್ ಕಬಳಿಸಿರುವುದು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಮಾತ್ರ. ಇವರಿಬ್ಬರು ಸ್ಪಿನ್ನರ್ಗಳು ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದೀಗ 41 ವರ್ಷದ ಜೇಮ್ಸ್ ಅ್ಯಂಡರ್ಸನ್ 187 ಟೆಸ್ಟ್ ಪಂದ್ಯಗಳ ಮೂಲಕ 700 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಏಕೈಕ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

2003 ರಲ್ಲಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ ಜೇಮ್ಸ್ ಅ್ಯಂಡರ್ಸನ್ ಇದುವರೆಗೆ 39873* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18568* ರನ್ ನೀಡುವ ಮೂಲಕ ಒಟ್ಟು 700 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 32 ಬಾರಿ 5 ವಿಕೆಟ್ ಕಬಳಿಸಿದರೆ, 3 ಬಾರಿ 10 ವಿಕೆಟ್ಗಳ ಸಾಧನೆ ಮಾಡಿದ್ದಾರೆ.
Published On - 9:42 am, Sat, 9 March 24

TV9 Kannada
Read More



