James Anderson: ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್

| Updated By: ಝಾಹಿರ್ ಯೂಸುಫ್

Updated on: Mar 09, 2024 | 9:48 AM

James Anderson Record: ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ 700 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ ಮೂಲಕ ಅ್ಯಂಡರ್ಸನ್ ಈ ಸಾಧನೆ ಮಾಡಿರುವುದು ವಿಶೇಷ. ಈ ಮೂಲಕ ಟೆಸ್ಟ್​ನಲ್ಲಿ 700 ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

1 / 5
ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೆಸ್ಟ್ ಕ್ರಿಕೆಟ್​ನಲ್ಲಿ ಬರೋಬ್ಬರಿ 700 ವಿಕೆಟ್ ಉರುಳಿಸುವ ಮೂಲಕ ಎಂಬುದು ವಿಶೇಷ.

2 / 5
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್​ ಕಬಳಿಸಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 5
ಇದಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್​ನಲ್ಲಿ 700+ ವಿಕೆಟ್ ಕಬಳಿಸಿರುವುದು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಮಾತ್ರ. ಇವರಿಬ್ಬರು ಸ್ಪಿನ್ನರ್​ಗಳು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 5
ಇದೀಗ 41 ವರ್ಷದ ಜೇಮ್ಸ್ ಅ್ಯಂಡರ್ಸನ್ 187 ಟೆಸ್ಟ್ ಪಂದ್ಯಗಳ ಮೂಲಕ 700 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಏಕೈಕ ವೇಗದ ಬೌಲರ್​ ಎನಿಸಿಕೊಂಡಿದ್ದಾರೆ.

5 / 5
2003 ರಲ್ಲಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ ಜೇಮ್ಸ್ ಅ್ಯಂಡರ್ಸನ್ ಇದುವರೆಗೆ 39873* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18568*	ರನ್ ನೀಡುವ ಮೂಲಕ ಒಟ್ಟು 700 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 32 ಬಾರಿ 5 ವಿಕೆಟ್ ಕಬಳಿಸಿದರೆ, 3 ಬಾರಿ 10 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

Published On - 9:42 am, Sat, 9 March 24