AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: ಜಿಮ್ಮಿ ಮಾರಕ ದಾಳಿಗೆ ಶೇನ್ ವಾರ್ನ್ ವಿಶ್ವ ದಾಖಲೆ ಶೇಕಿಂಗ್..!

James Anderson: ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ಜೇಮ್ಸ್​ ಅ್ಯಂಡರ್ಸನ್ ಪಾಲಾಗಲಿದೆ. ಹಾಗೆಯೇ ಈ ಸರಣಿಯಲ್ಲಿ 14 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರೆ ಶೇನ್ ವಾರ್ನ್​ ಅವರ ದಾಖಲೆಯನ್ನು ಮುರಿಯಬಹುದು.

TV9 Web
| Edited By: |

Updated on: Feb 13, 2024 | 11:08 AM

Share
ಭಾರತದ ವಿರುದ್ಧದ ಟೆಸ್ಟ್​ ಸರಣಿಯ 2ನೇ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಇದೀಗ ಹೊಸ ವಿಶ್ವ ದಾಖಲೆ ಹೊಸ್ತಿಲಲ್ಲಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವುದರೊಂದಿಗೆ ಅ್ಯಂಡರ್ಸನ್ ಅವರ ವಿಕೆಟ್ ಸಂಖ್ಯೆ 695 ಕ್ಕೇರಿದೆ.

1 / 7
ವಿಶೇಷ ಎಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 700 ಕ್ಕೂ ಅಧಿಕ ವಿಕೆಟ್ ಪಡೆದಿರುವುದು ಕೇವಲ ಇಬ್ಬರು ಬೌಲರ್​ಗಳು. ಅವರಿಬ್ಬರಲ್ಲಿ ಒಬ್ಬರ ದಾಖಲೆಯನ್ನು ಮುರಿಯುವತ್ತ ಇದೀಗ ಜೇಮ್ಸ್ ಅ್ಯಂಡರ್ಸನ್ ದಾಪುಗಾಲಿಟ್ಟಿದ್ದಾರೆ.

2 / 7
ಹೌದು, ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎಂಬ ವಿಶ್ವ ದಾಖಲೆ ಆಸ್ಟ್ರೇಲಿಯಾದ ಶೇನ್ ವಾರ್ನ್​ ಹೆಸರಿನಲ್ಲಿದೆ. ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ 273 ಇನಿಂಗ್ಸ್​ ಮೂಲಕ ಒಟ್ಟು 708 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

3 / 7
ಇದೀಗ 343 ಇನಿಂಗ್ಸ್ ಮೂಲಕ 695 ವಿಕೆಟ್ ಕಬಳಿಸಿರುವ ಜೇಮ್ಸ್ ಅ್ಯಂಡರ್ಸನ್​ಗೆ ಶೇನ್​ ವಾರ್ನ್​ ದಾಖಲೆ ಮುರಿಯಲು ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಸದ್ಯ ಅತ್ಯುತ್ತಮ ಫಾರ್ಮ್​ನಲ್ಲಿರುವ ಅ್ಯಂಡರ್ಸನ್ ಭಾರತದ ವಿರುದ್ಧದ ಕೊನೆಯ ಮೂರು ಪಂದ್ಯಗಳಲ್ಲೂ ಕಾಣಿಸಿಕೊಳ್ಳಬಹುದು. ಈ ಮೂಲಕ ವಾರ್ನ್ ಅವರ ವಿಶ್ವ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವ ಅವಕಾಶ ಅ್ಯಂಡರ್ಸನ್ ಮುಂದಿದೆ.

4 / 7
ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿನ ಐತಿಹಾಸಿಕ ದಾಖಲೆ ಬರೆಯಲು ಜೇಮ್ಸ್ ಅ್ಯಂಡರ್ಸನ್​ಗೆ 106 ವಿಕೆಟ್​ಗಳ ಅವಶ್ಯಕತೆಯಿದೆ. ಅಂದರೆ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ.

5 / 7
230 ಟೆಸ್ಟ್ ಇನಿಂಗ್ಸ್​ನಲ್ಲಿ 44039 ಚೆಂಡೆಸೆದಿರುವ ಮುತ್ತಯ್ಯ ಮುರಳೀಧರನ್ ಒಟ್ಟು 800 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಎಂಟು ನೂರು ವಿಕೆಟ್ ಉರುಳಿಸಿದ ಏಕೈಕ ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ.

6 / 7
ಇದೀಗ 343 ಇನಿಂಗ್ಸ್​ಗಳಲ್ಲಿ 39427 ಚೆಂಡೆಸೆದಿರುವ ಜೇಮ್ಸ್ ಅ್ಯಂಡರ್ಸನ್ 695 ವಿಕೆಟ್​ಗಳೊಂದಿಗೆ ಅತ್ಯಧಿಕ ವಿಕೆಟ್​ ಪಡೆದ ಸರದಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ