James Anderson: ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದ ಅ್ಯಂಡರ್ಸನ್
TV9 Web | Updated By: ಝಾಹಿರ್ ಯೂಸುಫ್
Updated on:
Feb 03, 2024 | 7:14 AM
India vs England 2nd Test: ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 41ನೇ ಇಳಿ ವಯಸ್ಸಿನಲ್ಲಿ ಎಂಬುದು ವಿಶೇಷ.
1 / 6
India vs England 2nd Test: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭಾರತದ ಮಾಜಿ ಆಟಗಾರನ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಅಂದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದಲ್ಲಿ ಟೆಸ್ಟ್ ಪಂದ್ಯವಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಲಾಲಾ ಅಮರನಾಥ್ ಹೆಸರಿನಲ್ಲಿತ್ತು.
3 / 6
ಭಾರತದ ಮಾಜಿ ಆಟಗಾರ ಲಾಲಾ ಅಮರನಾಥ್ ಅವರು 41 ವರ್ಷ 92 ದಿನಗಳ ವಯಸ್ಸಿನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. 1952 ರಲ್ಲಿ ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಅಮರನಾಥ್ ಅವರು ಈ ಸಾಧನೆ ಮಾಡಿದ್ದರು.
4 / 6
ಇದೀಗ ಈ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ಅಳಿಸಿ ಹಾಕಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿದಿರುವ ಅ್ಯಂಡರ್ಸನ್ ಅವರ ಪ್ರಸ್ತುತ ವಯಸ್ಸು 41 ವರ್ಷ, 187* ದಿನಗಳು. ಇದರೊಂದಿಗೆ ಭಾರತದಲ್ಲಿ ಟೆಸ್ಟ್ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಜೇಮ್ಸ್ ಅ್ಯಂಡರ್ಸನ್ ಪಾತ್ರರಾಗಿದ್ದಾರೆ.
5 / 6
ಇನ್ನು ಈ ಪಂದ್ಯದಲ್ಲಿ 17 ಓವರ್ಗಳನ್ನು ಬೌಲಿಂಗ್ ಮಾಡಿರುವ ಅ್ಯಂಡರ್ಸನ್ 30 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ತಮ್ಮ ಟೆಸ್ಟ್ ವಿಕೆಟ್ಗಳ ಸಂಖ್ಯೆಯನ್ನು 691* ಕ್ಕೇರಿಸಿದ್ದಾರೆ. ಅಂದರೆ ಇನ್ನು ಕೇವಲ 9 ವಿಕೆಟ್ಗಳನ್ನು ಕಬಳಿಸಿದ್ದಾರೆ ಟೆಸ್ಟ್ನಲ್ಲಿ 700 ವಿಕೆಟ್ ಪಡೆದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ.
6 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (179*) ಭರ್ಜರಿ ಶತಕ ಬಾರಿಸಿದ್ದಾರೆ. ಈ ಶತಕದ ನೆರವಿನಿಂದ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 336 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.