AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: 15 ವರ್ಷಗಳ ಬಳಿಕ ಟಿ20 ಕ್ರಿಕೆಟ್​ಗೆ ಆಡಲು ಜೇಮ್ಸ್ ಅ್ಯಂಡರ್ಸನ್ ಇಂಗಿತ

James Anderson: ಟೆಸ್ಟ್ ಕ್ರಿಕೆಟ್​ನ ಸರ್ವಶ್ರೇಷ್ಠ ವೇಗಿ ಎನಿಸಿಕೊಂಡಿರುವ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ಪರ ಕೇವಲ 19 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 18 ವಿಕೆಟ್ ಕಬಳಿಸಿದ್ದಾರೆ. ಇನ್ನು 2009 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದ ಅ್ಯಂಡರ್ಸನ್ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಫ್ರಾಂಚೈಸಿ ಲೀಗ್​ನತ್ತ ಮುಖ ಮಾಡಲು ಉತ್ಸುಕರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 14, 2024 | 12:44 PM

Share
ಇಂಗ್ಲೆಂಡ್​ನ ಸರ್ವಶ್ರೇಷ್ಠ ಬೌಲರ್​ ಜೇಮ್ಸ್ ಅ್ಯಂಡರ್ಸನ್ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದು 2009 ರಲ್ಲಿ. ಇದೀಗ 15 ವರ್ಷಗಳ ಬಳಿಕ ಮತ್ತೆ ಟಿ20 ಕ್ರಿಕೆಟ್ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದು ಸಹ ತಮ್ಮ 42ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

1 / 5
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ ವೀಕ್ಷಿಸುತ್ತಿದ್ದೇನೆ. ಈ ಲೀಗ್​ನಲ್ಲಿ ಒಬ್ಬ ಬೌಲರ್​ಗೆ ಕೇವಲ 20 ಎಸೆತಗಳು ಮಾತ್ರ ಇದೆ. ವಿಶೇಷ ಎಂದರೆ ಮೊದಲ 20 ಎಸೆತಗಳಲ್ಲಿ ಚೆಂಡು ಸ್ವಿಂಗ್ ಪಡೆಯುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ಸಹ ಅದನ್ನು ಮಾಡಬಲ್ಲೆ ಎಂದು ಜೇಮ್ಸ್ ಅ್ಯಂಡರ್ಸನ್ ಹೇಳಿದ್ದಾರೆ.

2 / 5
ಈ ಹೇಳಿಕೆಯೊಂದಿಗೆ, ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಬಲ್ಲೆ ಎಂಬ ವಿಶ್ವಾಸವನ್ನು ಅ್ಯಂಡರ್ಸನ್ ತಿಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವೇಗಿ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅ್ಯಂಡರ್ಸನ್ ದಿ ಹಂಡ್ರೆಡ್ ಲೀಗ್ ಅಥವಾ ಇತರೆ ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

3 / 5
ಸದ್ಯ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇನ್ನುಳಿದ ಸಮಯದಲ್ಲಿ ಲೀಗ್ ಕ್ರಿಕೆಟ್ ಆಡುವ ಇರಾದೆಯಲ್ಲಿದ್ದಾರೆ. ಅಂದರೆ ಇಂಗ್ಲೆಂಡ್ ತಂಡವು ಸೀಮಿತ ಓವರ್​ಗಳ ಸರಣಿ ಆಡುವ ವೇಳೆ ಜೇಮ್ಸ್ ಅ್ಯಂಡರ್ಸನ್ ಸಂಪೂರ್ಣ ಫ್ರೀಯಾಗಿರಲಿದ್ದು, ಹೀಗಾಗಿ ಚುಟುಕು ಕ್ರಿಕೆಟ್​ನತ್ತ ಮುಖ ಮಾಡಲು ಇಚ್ಛಿಸಿದ್ದಾರೆ.

4 / 5
ಇಂಗ್ಲೆಂಡ್ ಪರ 188 ಟೆಸ್ಟ್ ಪಂದ್ಯಗಳನ್ನಾಡಿರುವ 42ರ ಹರೆಯದ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿ ನಿವೃತ್ತಿ ಘೋಷಿಸಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!