AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: 22 ವರ್ಷಗಳಿಂದಲೂ ವಿಕೆಟ್​…ಜಿಮ್ಮಿ ಕಡೆಯಿಂದ ವಿಶೇಷ ವಿಶ್ವ ದಾಖಲೆ

James Anderson Records: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮಾರಕ ಬೌಲಿಂಗ್ ಸಂಘಟಿಸಿದ್ದ ಜೇಮ್ಸ್​ ಅ್ಯಂಡರ್ಸನ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂರು ವಿಕೆಟ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅ್ಯಂಡರ್ಸನ್ ವಿಶೇಷ ದಾಖಲೆ ಬರೆದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Feb 03, 2024 | 1:30 PM

Share
ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ 41 ವರ್ಷ ಜೇಮ್ಸ್ ಅ್ಯಂಡರ್ಸನ್ (James Anderson) ಇದೀಗ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಪ್ರತಿ ವರ್ಷ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ.

1 / 6
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರುವ ಅ್ಯಂಡರ್ಸನ್ 25 ಓವರ್​ಗಳನ್ನು ಎಸೆದು ಕೇವಲ 47 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂರು ವಿಕೆಟ್​ಗಳೊಂದಿಗೆ ಪ್ರತಿ ವರ್ಷ ವಿಕೆಟ್ ಪಡೆದ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದರು.

2 / 6
ಅಂದರೆ 2003 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಜೇಮ್ಸ್ ಅ್ಯಂಡರ್ಸನ್ ಪ್ರತಿ ವರ್ಷ ಕೂಡ ವಿಕೆಟ್​ ಕಬಳಿಸುತ್ತಾ ಬಂದಿದ್ದಾರೆ. 2003 ರಿಂದ ಶುರುವಾದ ಅವರ ವಿಕೆಟ್​ ಬೇಟೆ 2004, 2005, 2006, 2007, 2008, 2009, 2010, 2011, 2012, 2013, 2014, 2015, 2016, 2017, 2018, 2019, 2020, 2021, 2022, 2023..ಹೀಗೆ ಮುಂದುವರೆದು ಇದೀಗ 2024 ರಲ್ಲೂ ವಿಕೆಟ್ ಕಬಳಿಸಿದ್ದಾರೆ.

3 / 6
ಈ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಬಳಿಕ ಪ್ರತಿ ವರ್ಷ ವಿಕೆಟ್ ಕಬಳಿಸಿದ ವಿಶೇಷ ದಾಖಲೆಯೊಂದನ್ನು ಜೇಮ್ಸ್ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

4 / 6
ಸದ್ಯ ಟೆಸ್ಟ್ ಕ್ರಿಕೆಟ್​ನಲ್ಲಿ 342 ಇನಿಂಗ್ಸ್ ಆಡಿರುವ 41 ವರ್ಷದ ಜೇಮ್ಸ್ ಅ್ಯಂಡರ್ಸನ್ ಇಳಿ ವಯಸ್ಸಿನಲ್ಲೂ ಮಿಂಚಿನ ದಾಳಿ ಸಂಘಟಿಸುತ್ತಿದ್ದಾರೆ. ಇದೀಗ ಒಟ್ಟು 693 ವಿಕೆಟ್​ ಕಬಳಿಸಿರುವ ಜಿಮ್ಮಿ 700 ವಿಕೆಟ್​ಗಳ ಸಾಧನೆ ಮಾಡಲು ಇನ್ನು ಕೇವಲ 7 ವಿಕೆಟ್​ಗಳ ಅವಶ್ಯಕತೆಯಿದೆ.

5 / 6
ಈ ಮೂಲಕ ಟೆಸ್ಟ್​ನಲ್ಲಿ 700 ವಿಕೆಟ್​ಗಳನ್ನು ಕಬಳಿಸಿದ ಮೊದಲ ವೇಗಿ ವಿಶ್ವ ದಾಖಲೆ ಬರೆಯುವ ಉತ್ತಮ ಅವಕಾಶ ಜೇಮ್ಸ್ ಅ್ಯಂಡರ್ಸನ್ ಮುಂದಿದೆ. ಈ ದಾಖಲೆಯನ್ನು ಟೀಮ್ ಇಂಡಿಯಾ ವಿರುದ್ಧದ ಸರಣಿಯಲ್ಲೇ ಬರೆಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

6 / 6
TV9 Web
TV9 Web

TV9 Kannada

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!