AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gabba Test: ಗಬ್ಬಾ ಟೆಸ್ಟ್​ನಲ್ಲಿ ಟೀಮ್ ಇಂಡಿಯಾದ ಐತಿಹಾಸಿಕ ಜಯಕ್ಕೆ ಎರಡು ವರ್ಷ

India vs Australia Gabba Test: ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಜನವರಿ 19 ಎಂದೂ ಮರೆಯಲಾಗದ ದಿನ. ಟೆಸ್ಟ್ ಕ್ರಿಕೆಟ್​ನಲ್ಲಿ ಘಾತಕ ಬ್ಯಾಟರ್-ಬೌಲರ್​ಗಳಿಂದ ಕೂಡಿ ಎದುರಾಳಿಗರಿಗೆ ಕಂಟಕವಾಗಿದ್ದ ಆಸ್ಟ್ರೇಲಿಯಾ ತಂಡವನ್ನು ಅವರದ್ದೇ ನೆಲದಲ್ಲಿ ಸೋಲಿಸಿ ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದ ದಿನ.

TV9 Web
| Updated By: Vinay Bhat|

Updated on:Jan 20, 2023 | 11:52 AM

Share
ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಜನವರಿ 19 ಎಂದೂ ಮರೆಯಲಾಗದ ದಿನ. ಟೆಸ್ಟ್ ಕ್ರಿಕೆಟ್​ನಲ್ಲಿ ಘಾತಕ ಬ್ಯಾಟರ್-ಬೌಲರ್​ಗಳಿಂದ ಕೂಡಿ ಎದುರಾಳಿಗರಿಗೆ ಕಂಟಕವಾಗಿದ್ದ ಆಸ್ಟ್ರೇಲಿಯಾ ತಂಡವನ್ನು ಅವರದ್ದೇ ನೆಲದಲ್ಲಿ ಸೋಲಿಸಿ ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದ ದಿನ.

1 / 8
32 ವರ್ಷಗಳಿಂದ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ಸೋಲನ್ನೇ ಕಾಣದೆ ಮೆರೆಯುತ್ತಿದ್ದ ಬಲಿಷ್ಠ ಕಾಂಗರೂ ಪಡೆಯನ್ನು ಮಣ್ಣುಮುಕ್ಕಿಸಿ ಟೆಸ್ಟ್ ಸರಣಿಯನ್ನು ಭಾರತ ಗೆದ್ದು ಬೀಗಿತು. ಈ ಐತಿಹಾಸಿಕ ಕ್ಷಣಕ್ಕೆ ಎರಡು ವರ್ಷಗಳು ತುಂಬಿದೆ.

2 / 8
ಕಾಂಗರೂ ಪಡೆ ಮೊದಲನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು. ಆಗ ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್​ಗೆ ಮಾತ್ರ ಲಭ್ಯರಿದ್ದರು. ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿತು. ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಅಜಿಂಕ್ಯ ರಹಾನೆ ನಾಯಕತ್ವ ವಹಿಸಿಕೊಂಡರು.

3 / 8
ಎಂಸಿಜಿ ಅಂಗಳದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತದ ವೇಗದ ಬೌಲಿಂಗ್ ದಾಳಿಗೆ ತತ್ತರಿಸಿದ ಆಸೀಸ್ ಮೊದಲ ಇನ್ನಿಂಗ್ಸ್‌ನಲ್ಲಿ 195 ರನ್‌ಗಳಿಗೆ ಆಲೌಟ್ ಆಯಿತು. ಭಾರತ ರಹಾನೆ ಅದ್ಭುತ ಶತಕ, ಜಡೇಜಾರ ಅರ್ಧಶತಕದ ನೆರವಿನಿಂದ 326 ರನ್‌ ಗಳಿಸಿ ಆಲೌಟ್ ಆಯಿತು. 131 ರನ್‌ಗಳ ಮುನ್ನಡೆ ಕಾಯ್ದುಕೊಂಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ ಕಾಂಗರೂಗಳ ಆಟ ನಡೆಯದೆ 200 ರನ್‌ಗಳಿಗೆ ಆಲೌಟ್ ಆಗಿ 69 ರನ್‌ಗಳ ಅತ್ಯಲ್ಪ ಮುನ್ನಡೆ ಪಡೆಯಿತು. ಭಾರತ 1-1 ರಲ್ಲಿ ಸಮಬಲಗೊಳಿಸಿತು.

4 / 8
ಸಿಡ್ನಿ ಕ್ರಿಕೆಟ್‌ ಅಂಗಳದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಸಮಬಲದಿಂದ ಕಾದಾಡಿದವು. ಪಂದ್ಯ ಡ್ರಾ ಆದ ಪರಿಣಾಮ 1-1 ಅಂತರದಿಂದಲೇ ಮುಂದುವರೆಯಿತು.

5 / 8
ಸರಣಿಯ ಕೊನೆಯ ನಿರ್ಣಾಯಕ ಪಂದ್ಯ ಬ್ರಿಸ್ಬೇನ್‌ ಗಬ್ಬಾ ಅಂಗಳದಲ್ಲಿ ಆಯೋಜನೆಯಾಗಿತ್ತು. ಸತತ 32 ವರ್ಷಗಳಿಂದ ಗಬ್ಬಾ ಅಂಗಳದಲ್ಲಿ ಸೋಲನ್ನೇ ಕಾಣದ ಆಸ್ಟ್ರೇಲಿಯಾ ಪಡೆ ಭಾರತದ ವಿರುದ್ಧ ಸರಣಿ ಗೆಲ್ಲುವ ಕನಸು ಕಂಡಿದ್ದರು. ಆದರೆ, ರಹಾನೆ ನೇತೃತ್ವದ ಭಾರತ ಇತಿಹಾಸ ಸೃಷ್ಟಿಸಿತು.

6 / 8
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 369 ರನ್‌ಗಳಿಗೆ ಆಲೌಟ್ ಆಯಿತು. ನಂತರ ಮೊದಲ ಇನ್ನಿಂಗ್ಸ್ ಆಡಿದ ಭಾರತ 336 ರನ್‌ಗಳಿಗೆ ಆಲೌಟ್ ಆಗಿ 33 ರನ್‌ಗಳ ಹಿನ್ನಡೆ ಅನುಭವಿಸಿತು. ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡ 294 ರನ್‌ಗಳಿಗೆ ಆಲೌಟ್ ಆಗುವ ಮೂಲಕ 327 ರನ್‌ಗಳ ಮುನ್ನಡೆ ಪಡೆದುಕೊಂಡಿತು.

7 / 8
328 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತ ಕಾಂಗರೂಗಳ ಮಾರಕ ಬೌಲಿಂಗ್‌ ಅನ್ನು ಮೆಟ್ಟಿ ನಿಂತಿತು. ಶುಭಮನ್ ಗಿಲ್ 91 ರನ್ ಗಳಿಸಿದರೆ, ಪೂಜಾರ 211 ಎಸೆತಗಳಲ್ಲಿ 56 ರನ್‌ ಗಳಿಸಿ ಬಂಡೆಯಂತೆ ನಿಂತರು. ಆಸ್ಟ್ರೇಲಿಯಾ ಬೌಲರ್ ಗಳ ಬೆಂಡೆತ್ತಿದ ರಿಷಬ್ ಪಂತ್ ಅಜೇಯ 89 ರನ್‌ ಗಳಿಸುವ ಮೂಲಕ ಭಾರತಕ್ಕೆ ಐತಿಹಾಸಿಕ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.

8 / 8

Published On - 11:52 am, Fri, 20 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ