IND vs AUS: ಮೆಲ್ಬೋರ್ನ್​ನಲ್ಲಿ ದ್ವಿಶತಕ ಪೂರೈಸುತ್ತಾರಾ ಜಸ್ಪ್ರೀತ್ ಬುಮ್ರಾ?

Jasprit Bumrah: ಭಾರತ-ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಟೆಸ್ಟ್ ವೃತ್ತಿಜೀವನದ 200ನೇ ವಿಕೆಟ್ ಪಡೆಯುವ ಸಾಧ್ಯತೆಯಿದೆ. ಈಗಾಗಲೇ 194 ವಿಕೆಟ್‌ಗಳನ್ನು ಪಡೆದಿರುವ ಬುಮ್ರಾ, ಮೆಲ್ಬೋರ್ನ್‌ನಲ್ಲಿ ನಡೆಯುವ ಪಂದ್ಯದಲ್ಲಿ 6 ವಿಕೆಟ್‌ಗಳನ್ನು ಪಡೆದರೆ ಈ ಮೈಲುಗಲ್ಲನ್ನು ತಲುಪಲಿದ್ದಾರೆ. ಈ ಸರಣಿಯಲ್ಲಿ ಬುಮ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದು, 21 ವಿಕೆಟ್‌ಗಳನ್ನು ಪಡೆದು ಸರಣಿಯ ಅಗ್ರ ಬೌಲರ್ ಆಗಿದ್ದಾರೆ.

ಪೃಥ್ವಿಶಂಕರ
|

Updated on: Dec 22, 2024 | 4:18 PM

ಭಾರತ- ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಟೀಂ ಇಂಡಿಯಾದ ಭರವಸೆಯ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಬುಮ್ರಾ ದ್ವಿಶತಕ ಪೂರ್ಣಗೊಳಿಸುವ ಅವಕಾಶ ಹೊಂದಿದ್ದಾರೆ.

1 / 7
ವಾಸ್ತವವಾಗಿ ಇಡೀ ಸರಣಿಯಲ್ಲಿ ಭಾರತದ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ಆಟಗಾರರ ಪೈಕಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಬುಮ್ರಾ ಹೊರತುಪಡಿಸಿ ಕೆಎಲ್ ರಾಹುಲ್ ಮಾತ್ರ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸರಣಿಯ ಮೂರು ಟೆಸ್ಟ್‌ಗಳು ಪೂರ್ಣಗೊಳ್ಳುವವರೆಗೂ ಟೀಂ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರು ಫ್ಲಾಪ್ ಆಗಿದ್ದಾರೆ.

2 / 7
ಆದಾಗ್ಯೂ ತಂಡದ ಪರ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಜಸ್ಪ್ರೀತ್ ಬುಮ್ರಾ ಮೆಲ್ಬೋರ್ನ್ ಕ್ರಿಕೆಟ್​ ಮೈದಾನದಲ್ಲಿ ನಡೆಯಲ್ಲಿರುವ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕೇವಲ 6 ವಿಕೆಟ್ ಪಡೆದರೆ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 200 ವಿಕೆಟ್ ಪೂರೈಸಿದ ಸಾಧನೆ ಮಾಡಲಿದ್ದಾರೆ.

3 / 7
ವಾಸ್ತವವಾಗಿ, ಬುಮ್ರಾ ಇದುವರೆಗೆ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 194 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬುಮ್ರಾ ಬಾಕ್ಸಿಂಗ್ ಟೆಸ್ಟ್‌ನಲ್ಲಿ 6 ವಿಕೆಟ್ ಪಡೆಯುವ ಮೂಲಕ 200 ವಿಕೆಟ್‌ಗಳ ಸಂಖ್ಯೆಯನ್ನು ಮುಟ್ಟಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

4 / 7
ಇಲ್ಲಿಯವರೆಗೆ, ಬುಮ್ರಾ ಸರಣಿಯ ಎಲ್ಲಾ ಮೂರು ಟೆಸ್ಟ್‌ಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಪರ್ತ್‌ನಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್‌ನಲ್ಲಿ ಬುಮ್ರಾ 8 ವಿಕೆಟ್ ಪಡೆದಿದ್ದರು. ನಂತರ ಅಡಿಲೇಡ್‌ನಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಬುಮ್ರಾ ತಮ್ಮ ಖಾತೆಗೆ 4 ವಿಕೆಟ್‌ಗಳನ್ನು ಹಾಕಿಕೊಂಡಿದ್ದರು.

5 / 7
ಇದರ ನಂತರ, ಬ್ರಿಸ್ಬೇನ್‌ನಲ್ಲಿ ನಡೆದ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಬುಮ್ರಾ 9 ವಿಕೆಟ್‌ಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೆಲ್ಬೋರ್ನ್ ಅಂದರೆ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಬುಮ್ರಾ 6 ವಿಕೆಟ್ ಕಬಳಿಸುವುದು ದೊಡ್ಡ ವಿಚಾರವೇನಲ್ಲ.

6 / 7
ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರು ಪಂದ್ಯಗಳ ನಂತರ, ಬುಮ್ರಾ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿರುವುದು ಇಲ್ಲಿ ಎಂಬುದು ಗಮನಾರ್ಹ. ಬುಮ್ರಾ 10.90 ಸರಾಸರಿಯಲ್ಲಿ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 22.86ರ ಸರಾಸರಿಯಲ್ಲಿ 14 ವಿಕೆಟ್ ಪಡೆದಿರುವ ಮಿಚೆಲ್ ಸ್ಟಾರ್ಕ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

7 / 7
Follow us
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ

ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು

ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್

ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?