ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಬೌಲರ್ ದಾಖಲೆ ಇಂಗ್ಲೆಂಡ್ ಬೌಲರ್ ಸಿಡ್ನಿ ಬಾರ್ನ್ಸ್ ಹೆಸರಿನಲ್ಲಿದೆ. 1914 ರಲ್ಲಿ 932 ರೇಟಿಂಗ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ದಾಖಲೆಯನ್ನು ಮುರಿಯಲು ಜಸ್ಪ್ರೀತ್ ಬುಮ್ರಾಗೆ ಉತ್ತಮ ಅವಕಾಶವಿದ್ದು, ಅದಕ್ಕಾಗಿ ಮುಂಬರುವ ಟೆಸ್ಟ್ ಸರಣಿಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಮುಂದುವರೆಸಬೇಕಿದೆ.