2024 ರ ಟಿ20 ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಆಗಿ ಆಯ್ಕೆಯಾಗಿದ್ದು, ಈ ಪಂದ್ಯಾವಳಿಯುದ್ದಕ್ಕೂ ಅವರು ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. ಬುಮ್ರಾ ಆಡಿದ 8 ಪಂದ್ಯಗಳಲ್ಲಿ 8.27 ರ ಸರಾಸರಿಯಲ್ಲಿ 15 ವಿಕೆಟ್ಗಳನ್ನು ಪಡೆದಿದ್ದರು. ಈ ಅವಧಿಯಲ್ಲಿ, ಅವರು ಒಟ್ಟು 29.4 ಓವರ್‌ಗಳನ್ನು ಬೌಲ್ ಮಾಡಿ ಕೇವಲ 4.18 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು.