Jasprit Bumrah: ಭರ್ಜರಿ ದಾಖಲೆ ಬರೆದ ಬೂಮ್ ಬೂಮ್ ಬುಮ್ರಾ
India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸುವುದರೊಂದಿಗೆ ಬುಮ್ರಾ ದಿ ಲೆಜೆಂಡ್ ಕಪಿಲ್ ದೇವ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.
Updated on: Feb 04, 2024 | 7:56 AM

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಗಳ ಮೂಲಕ ಕಪಿಲ್ ದೇವ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಕೂಡ ಮುರಿದಿದ್ದಾರೆ.

ಈ ಪಂದ್ಯದಲ್ಲಿ 15.5 ಓವರ್ಗಳನ್ನು ಎಸೆದ ಬುಮ್ರಾ 45 ರನ್ ನೀಡಿ ಒಲೀ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್, ಟಾಮ್ ಹಾರ್ಟ್ಲಿ ಹಾಗೂ ಜೇಮ್ಸ್ ಅ್ಯಂಡರ್ಸನ್ ವಿಕೆಟ್ ಪಡೆದಿದ್ದರು. ಈ ಮೂಲಕ 6 ವಿಕೆಟ್ ಕಬಳಿಸಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 150 ಟೆಸ್ಟ್ ವಿಕೆಟ್ ಕಬಳಿಸಿ ವೇಗದ ಬೌಲರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಲೆಜೆಂಡ್ ಕಪಿಲ್ ದೇವ್ ಹೆಸರಿನಲ್ಲಿತ್ತು. ಕಪಿಲ್ 39 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಜಸ್ಪ್ರೀತ್ ಬುಮ್ರಾ ಈ ದಾಖಲೆಯನ್ನು ಮುರಿದಿದ್ದಾರೆ.

ಜಸ್ಪ್ರೀತ್ ಬುಮ್ರಾ ಕೇವಲ 34 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 150 ಟೆಸ್ಟ್ ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಅತೀ ವೇಗವಾಗಿ 150 ವಿಕೆಟ್ಗಳ ಸಾಧನೆ ಮಾಡಿದ ಏಷ್ಯಾದ 2ನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಬುಮ್ರಾ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 27 ಟೆಸ್ಟ್ ಪಂದ್ಯಗಳಿಂದ 150 ವಿಕೆಟ್ ಕಬಳಿಸಿದ ಪಾಕಿಸ್ತಾನದ ವಾಖರ್ ಯೂನಿಸ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 34 ಪಂದ್ಯಗಳಿಂದ 150 ವಿಕೆಟ್ ಪಡೆದಿರುವ ಬುಮ್ರಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರ ಈ ಭರ್ಜರಿ ಬೌಲಿಂಗ್ ಪ್ರದರ್ಶನದಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 253 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 143 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.
