- Kannada News Photo gallery Cricket photos Jasprit Bumrah becomes the first bowler to completed 200 Test wickets with best average
ಜಸ್ಪ್ರೀತ್ ಬುಮ್ರಾ ಬೆಂಕಿ ಬೌಲಿಂಗ್: 147 ವರ್ಷಗಳ ಇತಿಹಾಸದಲ್ಲೇ ಹೊಸ ದಾಖಲೆ
Australia vs India, 4th Test: ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್ ಪೇರಿಸಿದೆ. ಇದೀಗ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.
Updated on: Dec 29, 2024 | 9:03 AM

ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ, ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಮತ್ತೆ 4* ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್ಗಳೊಂದಿಗೆ ಬುಮ್ರಾ ಟೆಸ್ಟ್ ಕ್ರಿಕೆಟ್ನಲ್ಲಿ 200* ವಿಕೆಟ್ಗಳನ್ನು ಪೂರೈಸಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜಸ್ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494* ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202* ವಿಕೆಟ್ ಕಬಳಿಸಿದ್ದಾರೆ.

ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.

ಇದೀಗ ಟೆಸ್ಟ್ ಕ್ರಿಕೆಟ್ನಲ್ಲಿ 85 ಇನಿಂಗ್ಸ್ಗಳಲ್ಲಿ 1415* ಓವರ್ಗಳನ್ನು ಎಸೆದಿರುವ ಜಸ್ಪ್ರೀತ್ ಬುಮ್ರಾ ಒಟ್ಟು 202* ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




