ಜಸ್​ಪ್ರೀತ್ ಬುಮ್ರಾ ಬೆಂಕಿ ಬೌಲಿಂಗ್: 147 ವರ್ಷಗಳ ಇತಿಹಾಸದಲ್ಲೇ ಹೊಸ ದಾಖಲೆ

Updated on: Dec 29, 2024 | 9:03 AM

Australia vs India, 4th Test: ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಇದೀಗ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

1 / 5
ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4* ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200* ವಿಕೆಟ್​​ಗಳನ್ನು ಪೂರೈಸಿದ್ದಾರೆ.

2 / 5
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8494* ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202* ವಿಕೆಟ್ ಕಬಳಿಸಿದ್ದಾರೆ.

3 / 5
ಅದು ಕೂಡ ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿರುವುದು ವಿಶೇಷ.

5 / 5
ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ 85 ಇನಿಂಗ್ಸ್​​ಗಳಲ್ಲಿ 1415* ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ ಒಟ್ಟು 202* ವಿಕೆಟ್ ಕಬಳಿಸಿದ್ದು, ಈ ಮೂಲಕ 200+ ವಿಕೆಟ್ ಪಡೆದ ಭಾರತದ 12ನೇ ಬೌಲರ್​​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 82ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us