ODI World Cup 2023: ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ..!
ODI World Cup 2023: ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಪಡೆಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರಬಿದ್ದಿದೆ.
1 / 6
ಬರೋಬ್ಬರಿ 12 ವರ್ಷಗಳ ನಂತರ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಬಾರಿಯ ವಿಶ್ವಕಪ್‌ಗೆ ಟೀಂ ಇಂಡಿಯಾವನ್ನು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಟೀಂ ಇಂಡಿಯಾ ತವರು ನೆಲದಲ್ಲಿ ಪಂದ್ಯಗಳನ್ನು ಆಡುವುದರಿಂದ ತಂಡಕ್ಕೆ ಖಂಡಿತವಾಗಿಯೂ ಲಾಭವಾಗಲಿದೆ.
2 / 6
ಆದರೆ ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಪಡೆಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರಬಿದ್ದಿದೆ.
3 / 6
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಬುಮ್ರಾ ಆಡಿದ್ದರು. ಆ ನಂತರ ಅವರು ತಂಡದಲ್ಲಿ ಕಾಣಿಸಿಕೊಂಡಿಲ್ಲ. ಬೆನ್ನುನೋವಿನಿಂದಾಗಿ ತಂಡದಿಂದ ಹೊರಗುಳಿದಿದ್ದ ಬುಮ್ರಾ ಮಾರ್ಚ್‌ನಲ್ಲಿ ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
4 / 6
ಸದ್ಯ ಇಂಜುರಿಯಿಂದ ಚೇತರಿಸಿಕೊಂಡಿರುವ ಬುಮ್ರಾ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ನೆಟ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಪ್ರತಿ ದಿನ ಬುಮ್ರಾ ನೆಟ್ಸ್‌ನಲ್ಲಿ 7 ಓವರ್ ಬೌಲ್ ಮಾಡುವ ಮೂಲಕ ತಮ್ಮ ತಯಾರಿ ಆರಂಭಿಸಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿ ವೇಳೆಗೆ ಬುಮ್ರಾ ಪೂರ್ಣ ಫಿಟ್ ಆಗಿದ್ದರೆ ಏಷ್ಯಾಕಪ್ ಹಾಗೂ ವಿಶ್ವಕಪ್ನಲ್ಲಿ ಬುಮ್ರಾ ತಂಡದ ಪರ ಕಣಕ್ಕಿಳಿಯಲಿದ್ದಾರೆ.
5 / 6
ಆಗಸ್ಟ್ ತಿಂಗಳಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಬುಮ್ರಾ ಟೀಂ ಇಂಡಿಯಾಕ್ಕೆ ಮರಳುವ ಸಾಧ್ಯತೆಯಿದೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಪಿಟಿಐ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ, ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ತಂಡಕ್ಕೆ ಮರಳುವ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ ಎಂದಿದೆ.
6 / 6
ಇನ್ನು ಬುಮ್ರಾ ತಂಡಕ್ಕೆ ಮರಳುವ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಫಿಟ್ನೆಸ್ ಕೋಚ್ ರಾಮ್‌ಜಿ ಶ್ರೀನಿವಾಸನ್, ಬುಮ್ರಾ ಅವರ ಮರಳುವಿಕೆಯ ಬಗ್ಗೆ ಮ್ಯಾನೇಜ್‌ಮೆಂಟ್ ಆತುರಪಡಬಾರದು ಎಂದು ಒತ್ತಿ ಹೇಳಿದರು. ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಮೊದಲು ಬುಮ್ರಾ ಕೆಲವು ದೇಶೀಯ ಪಂದ್ಯಗಳನ್ನು ಆಡಬೇಕು ಎಂದು ಅವರು ಸಲಹೆ ನೀಡಿದರು.