AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕ್ಲೀನ್ ಬೌಲ್ಡ್ ಮಾಡಿ ಅಶ್ವಿನ್ ದಾಖಲೆ ಮುರಿದ ಜಸ್ಪ್ರೀತ್ ಬುಮ್ರಾ

Jasprit Bumrah's Historic Spell: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮಿಂಚಿದರು. ರಯಾನ್ ರಿಕಲ್ಟನ್ ವಿಕೆಟ್ ಪಡೆದು ಆರ್‌ ಅಶ್ವಿನ್ ಅವರ 151 ಕ್ಲೀನ್ ಬೌಲ್ಡ್ ದಾಖಲೆಯನ್ನು 152 ವಿಕೆಟ್‌ಗಳೊಂದಿಗೆ ಮುರಿದರು. 2018 ರಿಂದ ಅತಿ ಹೆಚ್ಚು ಆರಂಭಿಕರನ್ನು (13) ಔಟ್ ಮಾಡಿದ ದಾಖಲೆಗೂ ಪಾತ್ರರಾದರು. ಬುಮ್ರಾ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡಕ್ಕೆ ಬಲ ಬಂದಿತು.

ಪೃಥ್ವಿಶಂಕರ
|

Updated on: Nov 14, 2025 | 1:44 PM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ತೆಂಬಾ ಬವುಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಐಡೆನ್ ಮಾರ್ಕ್ರಾಮ್ ಮತ್ತು ರಯಾನ್ ರಿಕಲ್ಟನ್ ಅವರ ಆರಂಭಿಕ ಜೋಡಿ ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಆರಂಭವನ್ನು ನೀಡಿತು.

1 / 5
ಇವರಿಬ್ಬರ ಜೊತೆಯಾಟದಿಂದಾಗಿ ಆಫ್ರಿಕಾ ತಂಡದ ಸ್ಕೋರ್ ಮೊದಲ 10 ಓವರ್‌ಗಳಲ್ಲಿ 50 ರ ಗಡಿ ದಾಟಿತು. ಈ ವೇಳೆ 11ನೇ ಓವರ್ ಬೌಲ್ ಮಾಡಲು ದಾಳಿಗಿಳಿದ ಜಸ್ಪ್ರೀತ್ ಬುಮ್ರಾ ಆರಂಭಿಕ ರಯಾನ್ ರಿಕಲ್ಟನ್ ಅವರನ್ನು ಔಟ್ ಮಾಡುವ ಮೂಲಕ ಈ ಜೊತೆಯಾಟವನ್ನು ಮುರಿದರು. ಈ ವಿಕೆಟ್‌ನೊಂದಿಗೆ, ಬುಮ್ರಾ ಮಾಜಿ ಸ್ಪಿನ್ನರ್ ಆರ್ ಅಶ್ವಿನ್ ಅವರ ದಾಖಲೆಯನ್ನು ಮುರಿದರು.

2 / 5
ರಿಯಾನ್ ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ, ಅಶ್ವಿನ್ ಅವರನ್ನು ಹಿಂದಿಕ್ಕಿ ಭಾರತೀಯ ಕ್ರಿಕೆಟ್‌ನಲ್ಲಿ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಬುಮ್ರಾ ಇದುವರೆಗೆ 152 ವಿಕೆಟ್​ಗಳನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಪಡೆದಿದ್ದಾರೆ. ಈ ಮೂಲಕ ಮೂಲಕ 151 ವಿಕೆಟ್ ಪಡೆದಿದ್ದ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕುಂಬ್ಳೆ 186 ವಿಕೆಟ್‌ಗಳನ್ನು ಪಡೆದಿದ್ದರೆ, ಕಪಿಲ್ ದೇವ್ 167 ಕ್ಲೀನ್ ಬೌಲ್ಡ್ ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
ಇದು ಮಾತ್ರವಲ್ಲದೆ ಈ ಪಂದ್ಯದಲ್ಲಿ ಆರಂಭಿಕರಿಬ್ಬರನ್ನು ಔಟ್ ಮಾಡುವ ಮೂಲಕ ಬುಮ್ರಾ, 2018 ರಿಂದ ಈ ಸ್ವರೂಪದಲ್ಲಿ ಅತಿ ಹೆಚ್ಚು ಎದುರಾಳಿ ಆರಂಭಿಕರನ್ನು (13) ಔಟ್ ಮಾಡಿದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಇದಕ್ಕೂ ಮೊದಲು, ಈ ದಾಖಲೆಯನ್ನು ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ ಹೊಂದಿದ್ದರು, ಅವರು ಆರಂಭಿಕರನ್ನು 12 ಬಾರಿ ಔಟ್ ಮಾಡಿದ್ದರು.

4 / 5
ಮೊದಲು ರಯಾನ್ ರಿಕಲ್ಟನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಜಸ್ಪ್ರಿತ್ ಬುಮ್ರಾ, ನಂತರ ಐಡೆನ್ ಮಾರ್ಕ್ರಾಮ್ ಅವರನ್ನು ಪೆವಿಲಿಯನ್​ಗಟ್ಟಿದರು. ಬುಮ್ರಾ ತನ್ನ ಮೊದಲ ಸ್ಪೆಲ್‌ನಲ್ಲಿ ದಕ್ಷಿಣ ಆಫ್ರಿಕಾದ ಆರಂಭಿಕರನ್ನು ಔಟ್ ಮಾಡಿದರು. 7 ಓವರ್‌ಗಳಲ್ಲಿ 9 ರನ್‌ಗಳನ್ನು ಬಿಟ್ಟುಕೊಟ್ಟ ಬುಮ್ರಾ ಇದರಲ್ಲಿ ನಾಲ್ಕು ಮೇಡನ್ ಓವರ್‌ಗಳನ್ನು ಎಸೆದರು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್