ಇಂಗ್ಲೆಂಡ್​ನಲ್ಲಿ ಬೂಮ್ ಬೂಮ್… ಪಾಕ್ ವೇಗಿಯ ಐತಿಹಾಸಿಕ ದಾಖಲೆ ಕ್ಲೀನ್ ಬೌಲ್ಡ್

Updated on: Jun 22, 2025 | 8:31 AM

IND vs ENG: ಲೀಡ್ಸ್​ನಲ್ಲಿ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಟ್ರೋಫಿಯ ಮೊದಲ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್​ಗಳಿಸಿದೆ.

1 / 5
ಲೀಡ್ಸ್​​ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ಜಸ್​ಪ್ರೀತ್ ಬುಮ್ರಾ (Jasprit Bumrah) ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಅವರ ಶತಕಗಳ ನೆರವಿನೊಂದಿಗೆ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು.

2 / 5
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಮೊದಲ ಓವರ್​ನ ಕೊನೆಯ ಎಸೆತದಲ್ಲಿ ಝಾಕ್ ಕ್ರಾಲಿ (4) ವಿಕೆಟ್ ಕಬಳಿಸಿದ ಬುಮ್ರಾ, ಆ ಬಳಿಕ ಬೆನ್ ಡಕೆಟ್ (64) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇನ್ನು ದ್ವಿತೀಯ ದಿನದಾಟದ ಅಂತ್ಯದ ವೇಳೆ ಜೋ ರೂಟ್ (28) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಮೂರನೇ ಯಶಸ್ಸು ತಂದುಕೊಟ್ಟರು.

3 / 5
ಈ ಮೂರು ವಿಕೆಟ್​ಗಳೊಂದಿಗೆ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ಲೆಜೆಂಡ್ ವಾಸಿಂ ಅಕ್ರಂ ಅವರ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಅಕ್ರಂ ಹೆಸರಿನಲ್ಲಿತ್ತು.

4 / 5
ವಾಸಿಂ ಅಕ್ರಂ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ (SENA ದೇಶ) ಒಟ್ಟು 55 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ಒಟ್ಟು 146 ವಿಕೆಟ್ ಕಬಳಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಏಷ್ಯನ್ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

5 / 5
ಇದೀಗ ಈ ದಾಖಲೆ ಮುರಿಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ಈವರೆಗೆ 60 ಇನಿಂಗ್ಸ್ ಆಡಿರುವ ಬುಮ್ರಾ 148 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಸೇನಾ ದೇಶಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಏಷ್ಯಾದ ಬೌಲರ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.