AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ತನ್ನ ಬಗ್ಗೆ ಕೇಳಿ ಬಂದ ಫೇಕ್ ನ್ಯೂಸ್ ಗೆ ಸ್ಪಷ್ಟನೆ ನೀಡಿದ ಜಸ್​ಪ್ರೀತ್ ಬುಮ್ರಾ

Jasprit Bumrah: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಭರ್ಜರಿ ಪ್ರದರ್ಶನ ನೀಡಿದ್ದರು. 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದ ಬುಮ್ರಾ ಒಟ್ಟು 32 ವಿಕೆಟ್ ಕಬಳಿಸಿ ಇತಿಹಾಸ ನಿರ್ಮಿಸಿದ್ದರು. ಆದರೆ ಬೆನ್ನು ನೋವಿನ ಕಾರಣ ಕೊನೆಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ.

ಝಾಹಿರ್ ಯೂಸುಫ್
|

Updated on: Jan 16, 2025 | 9:53 AM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವುದು ಗೊತ್ತೇ ಇದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ಬೆನ್ನು ನೋವಿಗೆ ತುತ್ತಾಗಿದ್ದರು. ಇದಾದ ಬಳಿಕ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೀಗ ವೈದ್ಯಕೀಯ ನಿಗಾದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

1 / 6
ಜಸ್​ಪ್ರೀತ್ ಬುಮ್ರಾ ಅವರ ಬೆನ್ನಿನ ಭಾಗದಲ್ಲಿ ಊತ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಕಾರಣ ಬುಮ್ರಾ  ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಸಹ ಬಹುತೇಕ ಖಚಿತ ಎನ್ನಲಾಗುತ್ತಿದೆ.

2 / 6
ಇದರ ನಡುವೆ ಜಸ್​ಪ್ರೀತ್ ಬುಮ್ರಾಗೆ ವೈದ್ಯರು ಬೆಡ್ ರೆಸ್ಟ್ ಸೂಚಿಸಿದ್ದು, ಹೀಗಾಗಿ ಅವರು ಮೂರು ನಾಲ್ಕು ತಿಂಗಳುಗಳ ಕಾಲ ಮೈದಾನಕ್ಕಿಳಿಯಲ್ಲ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಬುಮ್ರಾ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.

3 / 6
ಬೆಡ್ ರೆಸ್ಟ್​ನಲ್ಲಿದ್ದೀನಿ ಎಂಬುದೆಲ್ಲಾ ಸುಳ್ಳು ಸುದ್ದಿ. ಸುಳ್ಳು ಸುದ್ದಿಗಳನ್ನು ಹರಡುವುದು ಸುಲಭ ಎಂಬುದು ಗೊತ್ತಿದೆ. ಆದರೆ ಇದನ್ನು ನೋಡಿ ನನಗೆ ನಗು ಬಂತು ಎಂದು ಬುಮ್ರಾ ತಮ್ಮ ಸಾಮಾಜಿಕ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಮೂರು-ನಾಲ್ಕು ತಿಂಗಳು ಮೈದಾನದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿಯನ್ನು ಅಲ್ಲೆಗೆಳೆದಿದ್ದಾರೆ.

4 / 6
ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ನಾನು ಕಾಣಿಸಿಕೊಳ್ಳಲಿದ್ದೇನೆ ಎಂಬುದನ್ನು ಪ್ರಸ್ತಾಪಿಸಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಮೂರು ಪಂದ್ಯಗಳಿಗೆ ಅವರು ಅಲಭ್ಯರಾಗುವುದು ಬಹುತೇಕ ಖಚಿತ ಎನ್ನಲಾಗುತ್ತದೆ. ಅಲ್ಲದೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮಾರ್ಚ್ ಮೊದಲ ವಾರದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.

5 / 6
ಇತ್ತ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾದರೆ, ಟೀಮ್ ಇಂಡಿಯಾದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಶಮಿ ಮುನ್ನಡೆಸಲಿದ್ದಾರೆ. ಕಳೆದ ಒಂದು ವರ್ಷದಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ ಇದೀಗ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯೊಂದಿಗೆ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ತಂಡದಲ್ಲೂ ಶಮಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ