ಇತ್ತ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾದರೆ, ಟೀಮ್ ಇಂಡಿಯಾದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಶಮಿ ಮುನ್ನಡೆಸಲಿದ್ದಾರೆ. ಕಳೆದ ಒಂದು ವರ್ಷದಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ ಇದೀಗ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯೊಂದಿಗೆ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ತಂಡದಲ್ಲೂ ಶಮಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.