- TV9 Kannada Photo gallery Cricket photos Jasprit Bumrah Cleared Fit for India vs Sri Lanka Test Series; BCCI Confirms Availability
IND vs SL: ಲಂಕಾ ವಿರುದ್ಧ ಟೆಸ್ಟ್ ಸರಣಿ ಆಡ್ತಾರಾ ಬುಮ್ರಾ? ಫಿಟ್ನೆಸ್ ವರದಿಯಲ್ಲಿ ಏನಿದೆ?
Jasprit Bumrah fitness: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ವೇಗಿ ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ. ಗಾಯದಿಂದ ಚೇತರಿಸಿಕೊಂಡ ಬುಮ್ರಾ ಎಲ್ಲಾ ಫಿಟ್ನೆಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಆಗಸ್ಟ್ 15 ರಿಂದ ಆರಂಭವಾಗುವ ಈ ಮಹತ್ವದ ಸರಣಿಗೆ ಭಾರತ ತಂಡ ಸಜ್ಜಾಗಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಈ ಸರಣಿ ಭಾರತಕ್ಕೆ ನಿರ್ಣಾಯಕವಾಗಿದೆ.
Updated on: Jul 31, 2026 | 6:55 PM

ಭಾರತ ಹಾಗೂ ಶ್ರೀಲಂಕಾ ನಡುವೆ ಎರಡು ಪಂದ್ಯಗಳ ಟಿ20 ಸರಣಿ ಆಗಸ್ಟ್ 15 ರಿಂದ ಪ್ರಾರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸ ಮಾಡಲಿದ್ದು, ಬಿಸಿಸಿಐ ಕೂಡ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅವರನ್ನು ಆಯ್ಕೆ ಮಾಡಲಾಗಿದೆಯಾದರೂ, ಅವರ ಲಭ್ಯತೆ ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿರಲಿದೆ ಎಂದು ಬಿಸಿಸಿಐ ಹೇಳಿತ್ತು(PC-PTI).

ಗಾಯದಿಂದ ಬಳಲುತ್ತಿದ್ದ ಬುಮ್ರಾ ಹಾಗೂ ಸುದರ್ಶನ್ ಚೇತರಿಕೆಯ ಹಾದಿಯಲ್ಲಿದ್ದರು. ಹೀಗಾಗಿ ಟೆಸ್ಟ್ ತಂಡದಲ್ಲಿ ಇವರಿಬ್ಬರನ್ನು ಬಿಸಿಸಿಐ ಆಯ್ಕೆ ಮಾಡಿತ್ತು. ಇದೀಗ ಇವರಿಬ್ಬರಲ್ಲಿ ಒಬ್ಬ ಆಟಗಾರನ ಪಿಟ್ನೆಸ್ ಹೊರಬಿದಿದ್ದು, ಆತ ಸಂಪೂರ್ಣವಾಗಿ ಫಿಟ್ ಆಗಿದ್ದು ಆಡುವ ಹನ್ನೊಂದರ ಬಳಗದ ಆಯ್ಕೆಗೆ ಲಭ್ಯವಿರಲಿದ್ದಾರೆ ಎಂದು ವರದಿಯಾಗಿದೆ(PC-PTI).

ಸಾಯಿ ಸುದರ್ಶನ್ ಹಾಗೂ ಜಸ್ಪ್ರಿತ್ ಬುಮ್ರಾ ಇವರಿಬ್ಬರಲ್ಲಿ, ಬುಮ್ರಾ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೀಗಾಗಿ ಮುಂದಿನ ತಿಂಗಳು ಶ್ರೀಲಂಕಾ ವಿರುದ್ಧ ನಡೆಯಲಿರುವ ಎರಡು ಟೆಸ್ಟ್ ಸರಣಿಯಲ್ಲಿ ಆಡಲು ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್ ಅವರಿಗೆ ಅನುಮತಿ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ(PC-PTI).

ಬುಮ್ರಾ ಚೇತರಿಕೆಯ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದ್ದು, ಅದರಲ್ಲಿ, ‘ಜಸ್ಪ್ರೀತ್ ಬುಮ್ರಾ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಅವರು ಎಲ್ಲಾ ಫಿಟ್ನೆಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ತಂಡದ ಕಾರ್ಯತಂತ್ರದ ಅವಿಭಾಜ್ಯ ಅಂಗವಾಗಿರುವುದರಿಂದ ಶ್ರೀಲಂಕಾ ವಿರುದ್ಧದ ಎರಡೂ ಪಂದ್ಯಗಳಿಗೆ ಅವರು ಲಭ್ಯವಿರುತ್ತಾರೆ ಎಂದಿದೆ(PC-PTI).

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಆಗಸ್ಟ್ 15 ರಂದು ಗಾಲೆಯಲ್ಲಿ ಆರಂಭವಾಗಲಿದ್ದು, ಎರಡನೇ ಪಂದ್ಯ ಆಗಸ್ಟ್ 23 ರಂದು ಕೊಲಂಬೊದಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯಲು ಭಾರತ ಪ್ರಸ್ತುತ ಆವೃತ್ತಿಯಲ್ಲಿ ಉಳಿದಿರುವ ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ಏಳನ್ನು ಗೆಲ್ಲಬೇಕು. ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಗೆ ಮುಂಚಿತವಾಗಿ ಶ್ರೀಲಂಕಾದಲ್ಲಿ 2-0 ಅಂತರದ ಸರಣಿ ಗೆಲುವು ಭಾರತಕ್ಕೆ ನಿರ್ಣಾಯಕವಾಗಿದೆ(PC-PTI).

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಸರನ್ಶ್ ಜೈನ್ (PC-PTI).




