AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ನಲ್ಲಿ ಚೊಚ್ಚಲ ಬಾರಿ ಶತಕ ಪೂರೈಸಿದ ಜಸ್​ಪ್ರೀತ್ ಬುಮ್ರಾ

India vs England Test: ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 358 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 669 ರನ್​ ಕಲೆಹಾಕಿದೆ. ಈ 669 ರನ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ನೀಡಿರುವುದು ಬರೋಬ್ಬರಿ 112 ರನ್​ಗಳು.

ಝಾಹಿರ್ ಯೂಸುಫ್
|

Updated on: Jul 27, 2025 | 10:31 AM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 7 ವರ್ಷಗಳಾಗಿವೆ. ಈ ಏಳು ವರ್ಷಗಳಲ್ಲಿ ಅವರು 48 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ 48 ಮ್ಯಾಚ್​ಗಳಲ್ಲಿ ಬುಮ್ರಾ 91 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಅವರು ಎಸೆದಿರುವ ಓವರ್​ಗಳ ಸಂಖ್ಯೆ 1558.

1 / 5
ಅಂದರೆ ಈವರೆಗೆ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ 9348 ಎಸೆತಗಳನ್ನು ಎಸೆದಿದ್ದಾರೆ. ಇದಾಗ್ಯೂ ಅವರು ಯಾವುದೇ ಇನಿಂಗ್ಸ್​ನಲ್ಲಿ 100 ಕ್ಕಿಂತ ಹೆಚ್ಚಿನ ರನ್ ಬಿಟ್ಟು ಕೊಟ್ಟಿರಲಿಲ್ಲ. ಕಳೆದ 90 ಇನಿಂಗ್ಸ್​ಗಳಲ್ಲಿ ಅವರ ವಿರುದ್ಧ ಯಾವುದೇ ತಂಡವು ನೂರಕ್ಕಿಂತ ಅಧಿಕ ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಇಂಗ್ಲೆಂಡ್ ಬ್ಯಾಟರ್​ಗಳು ಅಂತಹದೊಂದು ಸಾಧನೆ ಮಾಡಿದ್ದಾರೆ. 

2 / 5
ಹೌದು, ಟೆಸ್ಟ್ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ಜಸ್​ಪ್ರೀತ್ ಬುಮ್ರಾ ಇನಿಂಗ್ಸ್​ವೊಂದರಲ್ಲಿ 100 ಕ್ಕಿಂತ ಅಧಿಕ ರನ್ ಬಿಟ್ಟು ಕೊಟ್ಟಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 33 ಓವರ್​​ಗಳನ್ನು ಎಸೆದಿರುವ ಬುಮ್ರಾ ಬರೋಬ್ಬರಿ 112 ರನ್​ ನೀಡಿದ್ದಾರೆ. ಈ ಮೂಲಕ ಕಳೆದ 7 ವರ್ಷಗಳಿಂದ ರನ್ ನೀಡುವುದರಲ್ಲಿ ಶತಕ ಪೂರೈಸದ ಬುಮ್ರಾ ಇದೇ ಮೊದಲ ಬಾರಿ ಮೂರಂಕಿ ರನ್ ಬಿಟ್ಟು ಕೊಟ್ಟಿದ್ದಾರೆ.

3 / 5
ಇದಕ್ಕೂ ಮುನ್ನ ಜಸ್​ಪ್ರೀತ್ ಬುಮ್ರಾ ಅತ್ಯಧಿಕ ರನ್ ನೀಡಿದ್ದು ಆಸ್ಟ್ರೇಲಿಯಾ ವಿರುದ್ಧ. 2024 ರಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬುಮ್ರಾ 28.4 ಓವರ್​ಗಳಲ್ಲಿ 99 ರನ್ ನೀಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ 112 ರನ್​ ಚಚ್ಚಿಸಿಕೊಳ್ಳುವ ಮೂಲಕ ಮೂರಂಕಿ ಮೊತ್ತ ನೀಡಿದ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

4 / 5
ಇತ್ತ ಇದೇ ಮೊದಲ ಬಾರಿಗೆ ಇನಿಂಗ್ಸ್​ವೊಂದರಲ್ಲಿ ಮೂರಂಕಿ ಮೊತ್ತದ ರನ್ ಬಿಟ್ಟು ಕೊಟ್ಟರೂ 45 ಟೆಸ್ಟ್ ಪಂದ್ಯಗಳನ್ನಾಡಿ ಅತ್ಯುತ್ತಮ ಎಕಾನಮಿ ಹೊಂದಿರುವ ಭಾರತದ ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಬುಮ್ರಾ 48 ಟೆಸ್ಟ್ ಪಂದ್ಯಗಳಲ್ಲಿ ಓವರ್​ಗೆ ಕೇವಲ 2.79 ಸರಾಸರಿಯಲ್ಲಿ ಮಾತ್ರ ರನ್ ನೀಡಿದ್ದಾರೆ. ಅಲ್ಲದೆ ಇದರ ನಡುವೆ 219 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ