
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 157 ರನ್ ಕಲೆಹಾಕಿತು. ತಂಡದ ಪರ ಅಜ್ಮತುಲ್ಲಾ ಒಮರ್ಜಾಯ್ ಅತ್ಯಧಿಕ 64 ರನ್ಗಳ ಇನ್ನಿಂಗ್ಸ್ ಆಡಿದರು. ಇತ್ತ ಭಾರತದ ಪರ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು(PC-BCCI).
ತಮ್ಮ ಖೋಟಾದ 4 ಓವರ್ಗಳಲ್ಲಿ 26 ರನ್ಗಳನ್ನು ಬಿಟ್ಟುಕೊಟ್ಟ ಬುಮ್ರಾ ಏಕೈಕ ವಿಕೆಟ್ ರೂಪದಲ್ಲಿ ಅಫ್ಘಾನಿಸ್ತಾನದ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟ್ ಉರುಳಿಸಿದರು. ಇನ್ನಿಂಗ್ಸ್ನ ಮೊದಲ ಓವರ್ನ ಎರಡನೇ ಎಸೆತದಲ್ಲೇ ಬುಮ್ರಾ ಈ ವಿಕೆಟ್ ಪಡೆದಿದ್ದರಿಂದ ಗುರ್ಬಾಜ್ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ವಿಕೆಟ್ನೊಂದಿಗೆ ಬುಮ್ರಾ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ಮೈಲಿಗಲ್ಲನ್ನು ದಾಟಿದರು(PC-BCCI).
ರಹಮಾನುಲ್ಲಾ ಗುರ್ಬಾಜ್ ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ತಮ್ಮ ಟಿ20 ಕ್ರಿಕೆಟ್ ವೃತ್ತಿಜೀವನದಲ್ಲಿ 350 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಭುವನೇಶ್ವರ್ ಕುಮಾರ್ ಮತ್ತು ಯುಜ್ವೇಂದ್ರ ಚಾಹಲ್ ನಂತರ ಟಿ20 ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳನ್ನು ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ(PC-BCCI).
ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರ ಹೆಸರಿನಲ್ಲಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 343 ಪಂದ್ಯಗಳಲ್ಲಿ 396 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ನಂತರದ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 332 ಪಂದ್ಯಗಳಲ್ಲಿ 363 ವಿಕೆಟ್‌ಗಳನ್ನು ಪಡೆದಿದ್ದಾರೆ(PC-PTI).
ಇನ್ನು ಜಸ್ಪ್ರೀತ್ ಬುಮ್ರಾ 284 ಟಿ20 ಪಂದ್ಯಗಳಲ್ಲಿ 349 ವಿಕೆಟ್‌ಗಳನ್ನು ಪಡೆದಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಪಿಯೂಷ್ ಚಾವ್ಲಾ 329 ವಿಕೆಟ್‌ಗಳನ್ನು ಕಬಳಿಸಿದ್ದರೆ, ಐದನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 322 ವಿಕೆಟ್‌ಗಳನ್ನು ಪಡೆದಿದ್ದರು(PC-BCCI).