IND vs AUS: ಅಡಿಲೇಡ್ ಟೆಸ್ಟ್ಗೂ ಮುನ್ನ ಬುಮ್ರಾಗೆ ಸಿಹಿ ಸುದ್ದಿ ನೀಡಿದ ಐಸಿಸಿ
Jasprit Bumrah: ಪರ್ತ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಜಸ್ಪ್ರೀತ್ ಬುಮ್ರಾ ಅವರು ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. 8 ವಿಕೆಟ್ ಪಡೆದು ಭಾರತ ತಂಡವನ್ನು ಗೆಲುವಿಗೆ ನಾಯಕತ್ವ ವಹಿಸಿದ ಬುಮ್ರಾ, ಈ ಪ್ರಶಸ್ತಿಯನ್ನು ಎರಡನೇ ಬಾರಿ ಗೆಲ್ಲುವ ಸನಿಹದಲ್ಲಿದ್ದಾರೆ. ಮಾರ್ಕೊ ಯಾನ್ಸನ್ ಮತ್ತು ಹ್ಯಾರಿಸ್ ರೌಫ್ ಕೂಡ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
1 / 8
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್ನಲ್ಲಿ ನಾಳೆಯಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ ಐಸಿಸಿ ಸಂತಸದ ಸುದ್ದಿಯೊಂದನ್ನು ನೀಡಿದೆ. ಐಸಿಸಿ ನವೆಂಬರ್ ತಿಂಗಳ ಆಟಗಾರ ಪ್ರಶಸ್ತಿಗೆ ಬುಮ್ರಾರನ್ನು ನಾಮನಿರ್ದೇಶನ ಮಾಡಿದೆ.
2 / 8
ವಾಸ್ತವವಾಗಿ ಉಭಯ ತಂಡಗಳ ನಡುವೆ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡಿದ್ದರು. ಅವರ ನಾಯಕತ್ವದಲ್ಲಿ ತಂಡವು ಪರ್ತ್‌ನಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
3 / 8
ಈ ಪಂದ್ಯದಲ್ಲಿ ಬುಮ್ರಾ ನಾಯಕನಾಗಿ ಹಾಗೂ ಬೌಲರ್ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಪಂದ್ಯದಲ್ಲಿ ಒಟ್ಟು 8 ವಿಕೆಟ್ ಕಬಳಿಸಿ ತಂಡವನ್ನು 295 ರನ್‌ಗಳ ಬೃಹತ್ ಗೆಲುವಿನತ್ತ ಮುನ್ನಡೆಸಿದ್ದರು. ಐಸಿಸಿ ಈಗ ಬುಮ್ರಾ ಅವರ ಪ್ರಬಲ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.
4 / 8
ಪರ್ತ್ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ 30 ರನ್‌ಗಳಿಗೆ 5 ವಿಕೆಟ್ ಪಡೆದರು. ಈ ಮೂಲಕ ಭಾರತಕ್ಕೆ 46 ರನ್‌ಗಳ ಮುನ್ನಡೆ ಸಿಕ್ಕಿತು. ಇದಾದ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ 42 ರನ್‌ಗಳಿಗೆ 3 ವಿಕೆಟ್ ಪಡೆದರು. ಇದರ ಆಧಾರದ ಮೇಲೆ ಬುಮ್ರಾ ಈಗ ಎರಡನೇ ಬಾರಿಗೆ ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿ ಗೆಲ್ಲುವತ್ತ ಕಣ್ಣಿಟ್ಟಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಜೂನ್‌ನಲ್ಲಿ ಈ ಪ್ರಶಸ್ತಿಯನ್ನು ಗೆದ್ದಿದ್ದರು.
5 / 8
ಟೀಂ ಇಂಡಿಯಾ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆಗ ಜಸ್ಪ್ರೀತ್ ಬುಮ್ರಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದ ಬುಮ್ರಾ, ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು.
6 / 8
ಇದೀಗ ಎರಡನೇ ಬಾರಿಗೆ ಬುಮ್ರಾ ಈ ಪ್ರಶಸ್ತಿ ಗೆದ್ದರೆ ದೊಡ್ಡ ದಾಖಲೆಯನ್ನೂ ಮಾಡಲಿದ್ದಾರೆ. ವಾಸ್ತವವಾಗಿ, ಇಲ್ಲಿಯವರೆಗೆ, ವರ್ಷಕ್ಕೆ ಎರಡು ಬಾರಿ ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದ ಏಕೈಕ ಭಾರತೀಯ ಆಟಗಾರ ಶುಭ್ಮನ್ ಗಿಲ್. ಇದೀಗ ಈ ದಾಖಲೆ ಸರಿಗಟ್ಟಲು ಬುಮ್ರಾಗೆ ದೊಡ್ಡ ಅವಕಾಶ ಸಿಕ್ಕಿದೆ.
7 / 8
ಜಸ್ಪ್ರೀತ್ ಬುಮ್ರಾ ಅವರಲ್ಲದೆ, ಐಸಿಸಿ ಈ ಪ್ರಶಸ್ತಿಗೆ ಮಾರ್ಕೊ ಯಾನ್ಸನ್ ಮತ್ತು ಹ್ಯಾರಿಸ್ ರೌಫ್ ಅವರನ್ನು ನಾಮನಿರ್ದೇಶನ ಮಾಡಿದೆ. ಏಪ್ರಿಲ್ 2022 ರಲ್ಲಿ ಕೇಶವ್ ಮಹಾರಾಜ್ ನಂತರ ಈ ಪ್ರಶಸ್ತಿಯನ್ನು ಗೆದ್ದ ಮೊದಲ ದಕ್ಷಿಣ ಆಫ್ರಿಕಾದ ಆಟಗಾರನಾಗುವ ರೇಸ್‌ನಲ್ಲಿ ಯಾನ್ಸನ್ ಇದ್ದಾರೆ.
8 / 8
ಮತ್ತೊಂದೆಡೆ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಪಾಕಿಸ್ತಾನದ ಐತಿಹಾಸಿಕ ಗೆಲುವಿನಲ್ಲಿ ಹ್ಯಾರಿಸ್ ರೌಫ್ ಪ್ರಮುಖ ಪಾತ್ರ ವಹಿಸಿದ್ದರು. ಟಿ20 ಸರಣಿಯಲ್ಲೂ ಅವರು ತಮ್ಮ ಫಾರ್ಮ್ ಅನ್ನು ಮುಂದುವರೆಸಿದ್ದರು. ಹೀಗಿರುವಾಗ ಹಾರಿಸ್ ರೌವೂಫ್ ಕೂಡ ಈ ಪ್ರಶಸ್ತಿ ಗೆಲ್ಲುವ ರೇಸ್ನಲ್ಲಿದ್ದಾರೆ.
Published On - 5:08 pm, Thu, 5 December 24