IPL 2026: ಗೆರೆ ದಾಟುವುದರಲ್ಲಿ ಜಸ್ಪ್ರೀತ್ ಬುಮ್ರಾರನ್ನು ಮೀರಿಸುವವರಿಲ್ಲ

Updated on: Mar 20, 2026 | 10:23 PM

Jasprit Bumrah IPL no-ball record: ಟಿ20 ವಿಶ್ವಕಪ್ ಚಾಂಪಿಯನ್ ಜಸ್ಪ್ರೀತ್ ಬುಮ್ರಾ ಐಪಿಎಲ್‌ನಲ್ಲಿ ಅನಿರೀಕ್ಷಿತ ದಾಖಲೆಯೊಂದನ್ನು ಹೊಂದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ನೋ-ಬಾಲ್‌ಗಳನ್ನು ಎಸೆದ ಬೌಲರ್ ಇವರಾಗಿದ್ದಾರೆ, 32 ನೋ-ಬಾಲ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇದರ ಹೊರತಾಗಿಯೂ, ಬುಮ್ರಾ ಮುಂಬೈ ಇಂಡಿಯನ್ಸ್‌ಗೆ ನಾಲ್ಕು ಪ್ರಶಸ್ತಿಗಳನ್ನು ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದು, 183 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಋತುವಿನಲ್ಲಿ ಅವರ ಪ್ರದರ್ಶನ ಕುತೂಹಲ ಮೂಡಿಸಿದೆ.

1 / 5
ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಐಪಿಎಲ್​ನಲ್ಲಿ ತಮ್ಮ ಕೈಚಳಕ ತೋರಲು ಸಿದ್ಧರಾಗಿದ್ದಾರೆ.  ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಧಿಕ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಬುಮ್ರಾ, ಈ ಲೀಗ್​ನಲ್ಲಿ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಐಪಿಎಲ್​ನಲ್ಲಿ ತಮ್ಮ ಕೈಚಳಕ ತೋರಲು ಸಿದ್ಧರಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಧಿಕ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಬುಮ್ರಾ, ಈ ಲೀಗ್​ನಲ್ಲಿ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

2 / 5

ವಾಸ್ತವವಾಗಿ ಐಪಿಎಲ್‌ನಲ್ಲಿ ಅತಿ ಹೆಚ್ಚು ನೋ ಬಾಲ್​ಗಳನ್ನು ಬೌಲ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ ಮಾತ್ರವಲ್ಲದೆ ಈ ವಿಚಾರದಲ್ಲಿ ಬುಮ್ರಾ ಅವರ ಹತ್ತಿರದಲ್ಲಿ ಯಾವುದೇ ಬೌಲರ್​ಗಳಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಐಪಿಎಲ್‌ನಲ್ಲಿ ಬಹುಬೇಡಿಕೆಯ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಬುಮ್ರಾ ಈ ರೀತಿಯ ಬೇಡದ ದಾಖಲೆ ಬರೆದಿರುವುದು ನಂಬಲಾಸಾಧ್ಯವಾಗಿದೆ.

3 / 5

ಇದುವರೆಗೆ ಐಪಿಎಲ್‌ನಲ್ಲಿ 145 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿರುವ ಜಸ್ಪ್ರೀತ್ ಬುಮ್ರಾ 32 ನೋ-ಬಾಲ್‌ಗಳನ್ನು ಬೌಲ್ ಮಾಡಿದ್ದಾರೆ. ಬುಮ್ರಾ ನಂತರದ ಸ್ಥಾನದಲ್ಲಿರುವ ಅನುಭವಿ ವೇಗಿ ಉಮೇಶ್ ಯಾದವ್ 24 ನೋ-ಬಾಲ್‌ಗಳನ್ನು ಬೌಲ್ ಮಾಡಿದ್ದಾರೆ. ಮೂರನೇ ಸ್ಥಾನದಲ್ಲಿರುವ ಮತ್ತೊಬ್ಬ ಅನುಭವಿ ವೇಗಿ ಇಶಾಂತ್ ಶರ್ಮಾ 23 ನೋ-ಬಾಲ್‌ಗಳನ್ನು ಬೌಲ್ ಮಾಡಿದ್ದಾರೆ.

4 / 5

ಬುಮ್ರಾ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಪರಿಣಾಮಕಾರಿ ಮತ್ತು ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರು. ಆದ್ದರಿಂದ, ಅವರ ಹೆಸರಿನಲ್ಲಿರುವ ಈ ಅನಗತ್ಯ ದಾಖಲೆ ಆಶ್ಚರ್ಯಕರವಾಗಿದೆ. ಇದರ ಹೊರತಾಗಿಯೂ, ಬುಮ್ರಾ ಮುಂಬೈ ತಂಡವು ನಾಲ್ಕು ಪ್ರಶಸ್ತಿಗಳನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 5

ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ 145 ಇನ್ನಿಂಗ್ಸ್‌ಗಳನ್ನಾಡಿರುವ ಬುಮ್ರಾ 183 ವಿಕೆಟ್‌ಗಳನ್ನು ಕಬಳಿಸಿದ್ದು ಮುಂಬೈ ಇಂಡಿಯನ್ಸ್‌ ತಂಡದಲ್ಲಿರುವ ಅತ್ಯಂತ ಯಶಸ್ವಿ ಬೌಲರ್ ಆಗಿದ್ದಾರೆ. ಪ್ರಸ್ತುತ ಟೀಂ ಇಂಡಿಯಾಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟು ಅದ್ಭುತ ಫಾರ್ಮ್​ನಲ್ಲಿರುವ ಬುಮ್ರಾ, ಐಪಿಎಲ್‌ನಲ್ಲಿ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Loading...
Unable to load recommendations.
Follow Us