Champions Trophy 2025: ಭಾರತ vs ಪಾಕಿಸ್ತಾನ್ ಪಂದ್ಯಕ್ಕೆ ಜಸ್​ಪ್ರೀತ್ ಬುಮ್ರಾ ಅಲಭ್ಯ

Jasprit Bumrah is set to miss Champions Trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. 8 ತಂಡಗಳ ನಡುವಣ ಈ ಕದನದ ಆರಂಭಿಕ ಪಂದ್ಯಗಳಿಗೆ ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಅಲ್ಲದೆ ಅವರು ಕೇವಲ 2 ಮ್ಯಾಚ್​​ಗಳಲ್ಲಿ ಮಾತ್ರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Jan 12, 2025 | 9:40 AM

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತವಾಗಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಚಾಂಪಿಯನ್ಸ್ ಟ್ರೋಫಿಯ ಮೊದಲ ಸುತ್ತಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

1 / 7
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದರು. ಅಷ್ಟೇ ಅಲ್ಲದೆ ದ್ವಿತೀಯ ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದೀಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿರುವ ಬುಮ್ರಾಗೆ ಅವರ ಬೆನ್ನಿನಲ್ಲಿ ಊತ ಇರುವುದು ಕಂಡು ಬಂದಿದೆ.

2 / 7
ಹೀಗಾಗಿ ಜಸ್​ಪ್ರೀತ್ ಬುಮ್ರಾಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದಾಗಿ ಅವರು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅತ್ತ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದೆ.

3 / 7
ಫೆಬ್ರವರಿ 20 ರಂದು ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಬುಮ್ರಾ ಕಣಕ್ಕಿಳಿಯುವುದಿಲ್ಲ.

4 / 7
ಇನ್ನು ಟೀಮ್ ಇಂಡಿಯಾದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿರುವ ಈ ಪಂದ್ಯಕ್ಕೂ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.

5 / 7
ಹಾಗೆಯೇ ಭಾರತ ತಂಡವು ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಈ ಮೂರು ಪಂದ್ಯಗಳಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ಇನ್ನು ಮಾರ್ಚ್ ಮೊದಲ ವಾರದ ವೇಳೆಗೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗುವ ನಿರೀಕ್ಷೆಯಿದ್ದು, ಹೀಗಾಗಿ ನಾಕೌಟ್ ಹಂತದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಂದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಜಸ್​ಪ್ರೀತ್ ಬುಮ್ರಾ ಲಭ್ಯರಿರುವ ಸಾಧ್ಯತೆ ಹೆಚ್ಚು.

7 / 7

Published On - 9:10 am, Sun, 12 January 25

Follow us
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ

Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ

ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ

ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?