AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಜಸ್​ಪ್ರೀತ್ ಬುಮ್ರಾ ಔಟ್: ಎಡಗೈ ವೇಗಿಗೆ ಚೊಚ್ಚಲ ಚಾನ್ಸ್ 

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ (ಜುಲೈ 31) ಶುರುವಾಗಲಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Jul 30, 2025 | 8:57 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಟೀಮ್ ಇಂಡಿಯಾ ಮೂಲಗಳ ಮಾಹಿತಿ ಪ್ರಕಾರ, ಕೊನೆಯ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಪಡೆಯಲಿದ್ದಾರೆ. ಅತ್ತ ಬುಮ್ರಾ ಹೊರಗುಳಿಯುತ್ತಿರುವ ಕಾರಣ ಅವರ ಬದಲಿಗೆ ಮತ್ತೋರ್ವ ವೇಗಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಜಸ್​ಪ್ರೀತ್ ಬುಮ್ರಾ ಕೇವಲ 3 ಮ್ಯಾಚ್​ಗಳನ್ನು ಮಾತ್ರ ಆಡಲಿದ್ದಾರೆ ಎನ್ನಲಾಗಿತ್ತು. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿತ್ತು. ಅದರ ಭಾಗವಾಗಿ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿತ್ತು. ಆ ಬಳಿಕ 3ನೇ ಮತ್ತು 4ನೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬುಮ್ರಾಗೆ ಇದೀಗ ಮತ್ತೆ ರೆಸ್ಟ್ ನೀಡಲು ನಿರ್ಧರಿಸಲಾಗಿದೆ.

2 / 5
ಇತ್ತ ಜಸ್​ಪ್ರೀತ್ ಬುಮ್ರಾ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಗುಳಿತ್ತಿರುವ ಕಾರಣ, ಅವರ ಸ್ಥಾನದಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪಾದಾರ್ಪಣೆ ಮಾಡಲಿದ್ದಾರೆ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ. ಹೀಗಾಗಿ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಪಂದ್ಯದ ಮೂಲಕ ಅರ್ಷದೀಪ್ ಟೆಸ್ಟ್ ಕೆರಿಯರ್ ಆರಂಭಿಸುವುದನ್ನು ಎದುರು ನೋಡಬಹುದು.

3 / 5
ಇದಕ್ಕೂ ಮುನ್ನ ಅರ್ಷದೀಪ್ ಸಿಂಗ್ ಭಾರತದ ಪರ 63 ಟಿ20 ಹಾಗೂ 9 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 113 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಅರ್ಷದೀಪ್ ಸಿಂಗ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್, ಎನ್​. ಜಗದೀಸನ್ (ವಿಕೆಟ್ ಕೀಪರ್).

5 / 5
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್

ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!