ಟೀಮ್ ಇಂಡಿಯಾ (Team India) ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡು ವರ್ಷಗಳಾಗುತ್ತಾ ಬರುತ್ತಿವೆ. ಅಂದರೆ ಸೆಪ್ಟೆಂಬರ್ 25, 2022 ರಲ್ಲಿ ಬುಮ್ರಾ ಕೊನೆಯ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯಾರ್ಕರ್ ಸ್ಪೆಷಲಿಸ್ಟ್ ಇದೀಗ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.