Jasprit Bumrah: ಟೀಂ ಇಂಡಿಯಾಕ್ಕೆ ಬುಮ್ರಾ ಕಂಬ್ಯಾಕ್ ಯಾವಾಗ? ಇಲ್ಲಿದೆ ಬಿಗ್ ಅಪ್​ಡೇಟ್

Jasprit Bumrah: ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 18, 2023 | 1:47 PM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸೋತು ಭಾರಿ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಒಂದು ತಿಂಗಳ ಬಳಿಕ ವಿಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದೊಂದಿಗೆ ಈ ಹಿಂದೆ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ.

1 / 5
ಅವರುಗಳಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್​ರಂತಹ ಕ್ರಿಕೆಟಿಗರು ಸೇರಿದ್ದಾರೆ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

2 / 5
ಈ ಬಗ್ಗೆ ನ್ಯೂಸ್ 18 ವರದಿ ಮಾಡಿದ್ದು, ಆಗಸ್ಟ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಬುಮ್ರಾ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸ ಮುಗಿದ ಬಳಿಕ ಮೆನ್ ಇನ್ ಬ್ಲೂ ತಂಡ ಮೂರು ಪಂದ್ಯಗಳ ಟಿ20 ಸರಣಿಗೆ ಐರ್ಲೆಂಡ್​ಗೆ ಪ್ರಯಾಣಿಸಲಿದೆ. ಈ ಪ್ರವಾಸವೂ ಆಗಸ್ಟ್ 18 ರಿಂದ ಆರಂಭವಾಗಿ 20, ಮತ್ತು 23 ರಂದು ಅಂತ್ಯಗೊಳ್ಳಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

3 / 5
ಈ ಸರಣಿ ಬಳಿಕ ಟೀಂ ಇಂಡಿಯಾ ಏಷ್ಯಾಕಪ್​ಗಾಗಿ ಶ್ರೀಲಂಕಾ ಪ್ರವಾಸ ಮಾಡಬೇಕಾಗಿದೆ. ಹೀಗಾಗಿ ಏಷ್ಯಾಕಪ್ ತಯಾರಿಯ ದೃಷ್ಟಿಯಿಂದ ಬುಮ್ರಾ ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದಾರೆ. ಇಂಜುರಿಯಿಂದಾಗಿ ಬುಮ್ರಾ ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ 20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಹಾಗೆಯೇ ಐಪಿಎಲ್, ಡಬ್ಲ್ಯುಟಿಸಿಯಲ್ಲೂ ಆಡಲಿಲ್ಲ. ಆದರೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾಗವಹಿಸಲು ಬುಮ್ರಾ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

4 / 5
"ಜಸ್ಪ್ರೀತ್ ಬುಮ್ರಾ ಈ ವರ್ಷದ ಆಗಸ್ಟ್‌ನಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಸರಣಿಗೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ. ಎನ್​ಸಿಎಯ ವೈದ್ಯಕೀಯ ವಿಭಾಗ ಮುಖ್ಯಸ್ಥ ನಿತಿನ್ ಪಟೇಲ್ ಮತ್ತು ಫಿಸಿಯೋ ರಜನಿಕಾಂತ್, ಬುಮ್ರಾ ಅವರ ಫಿಟ್​ನೆಸ್​ಗೆ ಬುಮ್ರಾ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬುಮ್ರಾ ಪೂರ್ನ ಫಿಟ್‌ನೆಸ್‌ನೊಂದಿಗೆ ಮೈದಾನಕ್ಕೆ ಮರಳುವ ಸಾಧ್ಯತೆಯಿದೆ" ಎಂದು ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ