IPL 2025: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ..!
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್ಸಿಬಿ ತಂಡಗಳು ಮುಖಾಮುಖಿಯಾದರೆ, ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿದೆ. ಆದರೆ ಈ ಪಂದ್ಯಕ್ಕೆ ಮುಂಬೈ ತಂಡದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.
Updated on: Mar 08, 2025 | 9:04 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ ಬಹುತೇಕ ತಂಡಗಳು ಅಭ್ಯಾಸವನ್ನು ಆರಂಭಿಸಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಕ್ಯಾಂಪ್ನಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಫಿಟ್ನೆಸ್ ಸಮಸ್ಯೆ.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಜಸ್ಪ್ರೀತ್ ಬುಮ್ರಾ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಐಪಿಎಲ್ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎನ್ನಲಾಗಿತ್ತು. ಇದನ್ನು ಪುಷ್ಠೀಕರಿಸುವಂತೆ ಅವರು ಇತ್ತೀಚೆಗೆ ನೆಟ್ಸ್ನಲ್ಲಿ ಬೌಲಿಂಗ್ ಅಭ್ಯಾಸವನ್ನು ಸಹ ಮಾಡಿದ್ದರು.

ಫಿಟ್ನೆಸ್ ಪರಿಕ್ಷೀಸಲೆಂದೇ ನಡೆದ ಈ ಅಭ್ಯಾಸದ ವೇಳೆ ಬುಮ್ರಾ ಅವರು ಸಂಪೂರ್ಣ ಗುಣಮುಖರಾಗಿಲ್ಲ ಎಂಬುದು ತಿಳಿದು ಬಂದಿದೆ. ಅಲ್ಲದೆ ಈ ಸಮಸ್ಯೆಗಾಗಿ ಮತ್ತೊಂದಷ್ಟು ದಿನಗಳ ಕಾಲ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಹೀಗಾಗಿ ಮಾರ್ಚ್ 22 ರಿಂದ ಆರಂಭವಾಗಲಿರುವ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅವರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಜಸ್ಪ್ರೀತ್ ಬುಮ್ರಾ ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅಂದರೆ ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ಪಂದ್ಯಗಳಿಗೆ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಇನ್ನು ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ 2 ಪಂದ್ಯಗಳನ್ನಾಡಲಿದ್ದು, ಈ ವೇಳೆ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಲಿಝಾಡ್ ವಿಲಿಯಮ್ಸ್, ಮುಜೀಬ್ ಉರ್ ರೆಹಮಾನ್.



















