AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W,W,W: ಟೆಸ್ಟ್​ನಲ್ಲಿ ಇತಿಹಾಸ ನಿರ್ಮಿಸಿದ ಜಸ್​ಪ್ರೀತ್ ಬುಮ್ರಾ

Australia vs India, 3rd Test: ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕ ಸಿಡಿಸಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 15, 2024 | 12:53 PM

Share
ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಬಿಗಿ ದಾಳಿ ಸಂಘಟಿಸಿದ್ದಾರೆ. ಆಸ್ಟ್ರೇಲಿಯಾ ಬ್ಯಾಟರ್​​ಗಳ ಅಬ್ಬರದ ನಡುವೆ ಕರಾರುವಾಕ್ ದಾಳಿ ನಡೆಸಿದ ಬುಮ್ರಾ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 / 6
ದ್ವಿತೀಯ ದಿನದಾಟದ ಆರಂಭದಲ್ಲೇ ಉಸ್ಮಾನ್ ಖ್ವಾಜಾ (21) ವಿಕೆಟ್ ಕಬಳಿಸಿ ಶುಭಾರಂಭ ಮಾಡಿದ ಬುಮ್ರಾ, ಆ ಬಳಿಕ ನಾಥನ್ ಮೆಕ್​ಸ್ವೀನಿ (9) ವಿಕೆಟ್ ಪಡೆದರು. ಇದಾದ ಬಳಿಕ ಸ್ವೀವ್ ಸ್ಮಿತ್ (101) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಆ ಬಳಿಕ ಬಂದ ಮಿಚೆಲ್ ಮಾರ್ಷ್ 5 ರನ್​​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಟ್ರಾವಿಸ್ ಹೆಡ್ (152) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು.

2 / 6
ಈ 5 ವಿಕೆಟ್​ಗಳೊಂದಿಗೆ ವಿದೇಶಿ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು.

3 / 6
ಕಪಿಲ್ ದೇವ್​ ವಿದೇಶಿ ಟೆಸ್ಟ್​ನಲ್ಲಿ 10 ಬಾರಿ 5 ವಿಕೆಟ್​ಗಳ ಗುಚ್ಛ ಪಡೆದಿದ್ದಾರೆ. ಇದೀಗ ವಿದೇಶಿ ಪಿಚ್​ನಲ್ಲಿ 11ನೇ ಬಾರಿ 5 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 6
ಹಾಗೆಯೇ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ದೇಶಗಳಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತೀಯ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೂಡ ಕಪಿಲ್ ದೇವ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 5 ವಿಕೆಟ್ ಕಬಳಿಸಿ SENA ದೇಶದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

5 / 6
ಜಸ್​ಪ್ರೀತ್ ಬುಮ್ರಾ ಅವರ ಈ ಮಿಂಚಿನ ದಾಳಿಯ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಈ ಪಂದ್ಯದಲ್ಲಿ ಟ್ರಾವಿಸ್ ಹೆಡ್ (151) ಹಾಗೂ ಸ್ಟೀವ್ ಸ್ಮಿತ್ (101) ಬಾರಿಸಿದ ಸೆಂಚುರಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 93 ಓವರ್​​ಗಳ ಮುಕ್ತಾಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 356 ರನ್ ಕಲೆಹಾಕಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ