ಹಾಗೆಯೇ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ದೇಶಗಳಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತೀಯ ಬೌಲರ್ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೂಡ ಕಪಿಲ್ ದೇವ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 5 ವಿಕೆಟ್ ಕಬಳಿಸಿ SENA ದೇಶದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.