AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah NetWorth: ವಿಶ್ವದ ನಂ.1 ಬೌಲರ್ ಜಸ್ಪ್ರೀತ್ ಬುಮ್ರಾ ಎಷ್ಟು ಕೋಟಿಯ ಒಡೆಯ ಗೊತ್ತಾ?

Jasprit Bumrah NetWorth: ಜಸ್ಪ್ರೀತ್ ಬುಮ್ರಾ ಭಾರತ ತಂಡದ ಹೊರತಾಗಿ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿಯುತ್ತಾರೆ. 2013ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಬುಮ್ರಾ ಅವರ ಸಂಭಾವನೆಯಲ್ಲಿ ಅಲ್ಲಿಂದ ಇಲ್ಲಿಯವರೆಗೂ ಭಾರಿ ವ್ಯತ್ಯಾಸವಾಗಿದೆ.

ಪೃಥ್ವಿಶಂಕರ
|

Updated on: Feb 07, 2024 | 8:04 PM

Share
ಜಸ್ಪ್ರೀತ್ ಬುಮ್ರಾ

ಜಸ್ಪ್ರೀತ್ ಬುಮ್ರಾ

1 / 10
ಟೀಂ ಇಂಡಿಯಾದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿರುವ ಬುಮ್ರಾ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಅಗ್ರಸ್ಥಾನ ಪಡೆದ ಭಾರತ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಬುಮ್ರಾಗೂ ಮೊದಲು ವಿರಾಟ್ ಕೊಹ್ಲಿ ಮೂರು ಮಾದರಿಯಲ್ಲೂ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದರು.

2 / 10
ಪ್ರಸ್ತುತ ಭಾರತ ಟೆಸ್ಟ್ ತಂಡದ ಉಪನಾಯಕರಾಗಿರುವ ಬುಮ್ರಾ, ಮೂರು ಮಾದರಿಯ ಕ್ರಿಕೆಟ್​ನಲ್ಲೂ ಟೀಂ ಇಂಡಿಯಾ ಬೌಲಿಂಗ್ ವಿಭಾಗದ ಜೀವಾಳವಾಗಿದ್ದಾರೆ. ಹಾಗೆಯೇ ತಮ್ಮ ಪ್ರತಿಭೆಯ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ಈ ಯಾರ್ಕರ್ ಕಿಂಗ್​ ಗಳಿಕೆಯಲ್ಲೂ ಸಾಕಷ್ಟು ಮುಂದಿದ್ದಾರೆ.

3 / 10
ಜಸ್ಪ್ರೀತ್ ಬುಮ್ರಾ ಭಾರತ ತಂಡದ ಹೊರತಾಗಿ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿಯುತ್ತಾರೆ. 2013ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಬುಮ್ರಾ ಅವರ ಸಂಭಾವನೆಯಲ್ಲಿ ಅಲ್ಲಿಂದ ಇಲ್ಲಿಯವರೆಗೂ ಭಾರಿ ವ್ಯತ್ಯಾಸವಾಗಿದೆ.

4 / 10
2018ರಲ್ಲಿ ಒಂದು ಸೀಸನ್‌ಗೆ 7 ಕೋಟಿ ರೂಪಾಯಿ ಪಡೆಯುತ್ತಿದ್ದ ಬುಮ್ರಾ ಈಗ ಪ್ರತಿ ಸೀಸನ್‌ಗೆ 12 ಕೋಟಿ ರೂಪಾಯಿ ತೆಗೆದುಕೊಳ್ಳುತ್ತಿದ್ದಾರೆ. ಅವರು 2013 ಮತ್ತು 2023 ರ ನಡುವೆ ಐಪಿಎಲ್‌ನಿಂದ ಸರಿಸುಮಾರು 56 ಕೋಟಿ ರೂ. ಆದಾಯ ಗಳಿಸಿದ್ದಾರೆ.

5 / 10
ಹೀಗಾಗಿ ಬುಮ್ರಾ ಲೀಗ್ ಕ್ರಿಕೆಟ್‌ನಿಂದ ವರ್ಷಕ್ಕೆ 12 ಕೋಟಿ ರೂಪಾಯಿಗಳನ್ನು ಪಡೆದರೆ, ಬಿಸಿಸಿಐ ಜೊತೆಗಿನ ವಾರ್ಷಿಕ ಒಪ್ಪಂದದ ಅಡಿಯಲ್ಲಿ ಅವರು 7 ಕೋಟಿ ರೂಪಾಯಿಗಳನ್ನು ಸಂಭಾವನೆ ರೂಪದಲ್ಲಿ ಪಡೆಯುತ್ತಾರೆ.

6 / 10
ಹಾಗೆಯೇ ಬುಮ್ರಾ ಟೀಂ ಇಂಡಿಯಾ ಪರ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳನ್ನು ಆಡಲು ಕ್ರಮವಾಗಿ 15 ಲಕ್ಷ, 7 ಲಕ್ಷ ಮತ್ತು 3 ಲಕ್ಷ ರೂಗಳನ್ನು ಪಂದ್ಯ ಶುಲ್ಕವಾಗಿ ಪಡೆಯುತ್ತಾರೆ.

7 / 10
ವರದಿಯ ಪ್ರಕಾರ, ಬುಮ್ರಾ 14 ಕಂಪನಿಗಳ ಬ್ರಾಂಡ್‌ ಅಂಭಾಸಿಡರ್ ಆಗಿದ್ದು, ಒಂದು ದಿನದ ಕಾಲ್​ಶೀಟ್​ಗಾಗಿ ಬುಮ್ರಾ 1.5 ರಿಂದ 2 ಕೋಟಿ ರೂ. ಚಾರ್ಜ್​ ಮಾಡುತ್ತಾರೆ ಎಂದು ವರದಿಯಾಗಿದೆ.

8 / 10
ಇವೆಲ್ಲವುಗಳೊಂದಿಗೆ ಜಸ್ಪ್ರೀತ್ ಬುಮ್ರಾ ಅವರು ಮುಂಬೈ ಜೊತೆಗೆ ಅಹಮದಾಬಾದ್‌ನಲ್ಲಿ ಮನೆ ಹೊಂದಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯ ಬೆಲೆ 2 ಕೋಟಿ ಇದ್ದರೆ, ಅಹಮದಾಬಾದ್‌ನಲ್ಲಿರುವ ಅವರ ಮನೆಯ ಬೆಲೆ 3 ಕೋಟಿ ರೂ. ಆಗಿದೆ.

9 / 10
ಬುಮ್ರಾ ಹಲವು ದುಬಾರಿ ಕಾರುಗಳ ಒಡೆಯರಾಗಿದ್ದು ಅವರ ಬಳಿ Mercedes Maybach S560, Nissan GT-R, Range Rover Velar, Toyota Innova Crysta ಮತ್ತು Hyundai Verna ಕಾರುಗಳಿವೆ.

10 / 10
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ

ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ