ಬುಮ್ ಬೂಮ್ ಬುಮ್ರಾ… SENA ದೇಶಗಳಲ್ಲಿ ಹೊಸ ದಾಖಲೆ ನಿರ್ಮಾಣ

|

Updated on: Nov 23, 2024 | 10:33 AM

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ಪರ್ತ್​ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 150 ರನ್ ಕಲೆಹಾಕಿದರೆ, ಆಸ್ಟ್ರೇಲಿಯಾ ತಂಡವು 104 ರನ್​ಗಳಿಸಿ ಆಲೌಟ್ ಆಗಿದೆ.

1 / 5
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಜಸ್​ಪ್ರೀತ್ ಬುಮ್ರಾ ಹೊಸ ದಾಖಲೆ ಬರೆದಿದ್ದಾರೆ. ಪರ್ತ್​ನ ಒಪ್ಟಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬುಮ್ರಾ 30 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ.

2 / 5
ಈ ಐದು ವಿಕೆಟ್​ಗಳೊಂದಿಗೆ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ (SENA) ದೇಶಗಳಲ್ಲಿ ಅತ್ಯಧಿಕ 5 ವಿಕೆಟ್​ ಕಬಳಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ರೆಕಾರ್ಡ್ ಲೆಜೆಂಡ್ ಕಪಿಲ್ ದೇವ್ ಹೆಸರಿನಲ್ಲಿತ್ತು.

3 / 5
SENA ದೇಶಗಳಲ್ಲಿ ಒಟ್ಟು 62 ಇನಿಂಗ್ಸ್ ಆಡಿದ್ದ ಕಪಿಲ್ ದೇವ್ 7 ಬಾರಿ 5 ವಿಕೆಟ್​ ಕಬಳಿಸಿ ಮಿಂಚಿದ್ದರು. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಆಡಲಾದ ಟೆಸ್ಟ್​ ಪಂದ್ಯಗಳಲ್ಲಿ ಅತ್ಯಧಿಕ ಬಾರಿ 5 ವಿಕೆಟ್​ ಕಬಳಿಸಿ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಕಬಳಿಸಿ ಜಸ್​ಪ್ರೀತ್ ಬುಮ್ರಾ ಕಪಿಲ್ ದೇವ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಒಟ್ಟು 51 ಇನಿಂಗ್ಸ್ ಆಡಿರುವ ಬುಮ್ರಾ 7 ಬಾರಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 5
ಈ ಮೂಲಕ SENA ದೇಶಗಳಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬುಮ್ರಾ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಕೇವಲ 104 ರನ್​ಗಳಿಗೆ ಆಲೌಟ್ ಆಗಿದೆ.