ಐಸಿಸಿ ತಿಂಗಳ ಆಟಗಾರರ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ ಜತೆ ಇಬ್ಬರ ವೇಗಿಗಳ ಪೈಪೋಟಿ

ICC Player of the Month: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರತಿ ತಿಂಗಳು ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಯನ್ನು ನೀಡುತ್ತದೆ. ಈ ಬಾರಿ ಈ ಪ್ರಶಸ್ತಿ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ಇಬ್ಬರು ಪ್ರಮುಖ ಬೌಲರ್​​ಗಳು ಸಹ ಈ ಪ್ರಶಸ್ತಿ ಸುತ್ತಿನ ಪೈಪೋಟಿಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 08, 2025 | 9:24 AM

ಐಸಿಸಿ ಡಿಸೆಂಬರ್ ತಿಂಗಳ ಆಟಗಾರರ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಸೌತ್ ಆಫ್ರಿಕಾ ವೇಗಿ ಡೇನ್ ಪ್ಯಾಟರ್ಸನ್ ಕಾಣಿಸಿಕೊಂಡಿದ್ದಾರೆ.

1 / 5
ಜಸ್​​ಪ್ರೀತ್ ಬುಮ್ರಾ: ಡಿಸೆಂಬರ್ ತಿಂಗಳಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದ ಜಸ್​ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಅಡಿಲೇಡ್​ನಲ್ಲಿ 61ಕ್ಕೆ 4, ಬ್ರಿಸ್ಬೇನ್‌ನಲ್ಲಿ 76ಕ್ಕೆ 6, ಮತ್ತು ಮೆಲ್ಬೋರ್ನ್‌ನಲ್ಲಿ 9 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಡಿಸೆಂಬರ್ ತಿಂಗಳ ಅಟಗಾರರ ಪಟ್ಟಿಗೆ ನಾಮನಿರ್ದೇನಗೊಂಡಿದ್ದಾರೆ.

2 / 5
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ ಡಿಸೆಂಬರ್ ತಿಂಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದರು. ಈ ವೇಳೆ ಬ್ಯಾಟಿಂಗ್​ ಮೂಲಕ 144 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ 17 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಕಳೆದ ತಿಂಗಳ ಆಟಗಾರರ ಪಟ್ಟಿಯಲ್ಲಿ ಕಮಿನ್ಸ್ ಕೂಡ ಕಾಣಿಸಿಕೊಂಡಿದ್ದಾರೆ.

3 / 5
ಡೇನ್ ಪ್ಯಾಟರ್ಸನ್: ಸೌತ್ ಆಫ್ರಿಕಾ ವೇಗಿ ಡೇನ್ ಪ್ಯಾಟರ್ಸನ್ ಡಿಸೆಂಬರ್​ನಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ವಿಕೆಟ್​ ಕಬಳಿಸುವ ಮೂಲಕ ಸೌತ್ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಡೇನ್ ಪ್ಯಾಟರ್ಸನ್ ಕೂಡ ಐಸಿಸಿ ಡಿಸೆಂಬರ್ ತಿಂಗಳ ಆಟಗಾರರನಾಗಿ ನಾಮನಿರ್ದೇಶಿತರಾಗಿದ್ದಾರೆ.

4 / 5
ಈ ಮೂವರು ಆಟಗಾರರಲ್ಲಿ ಒಬ್ಬರಿಗೆ ಐಸಿಸಿ ಡಿಸೆಂಬರ್ ತಿಂಗಳ ಆಟಗಾರನ ಪ್ರಶಸ್ತಿ ಒಲಿಯಲಿದೆ. ಇವರಲ್ಲಿ ಯಾರು ಪ್ಲೇಯರ್ ಆಫ್ ದಿ ಮಂತ್ ಎಂಬುದನ್ನು ನಿರ್ಧರಿಸಲು ನೀವು ಕೂಡ ಓಟ್ ಮಾಡಬಹುದು. ಇದಕ್ಕಾಗಿ www.icc-cricket.com/awards ವೆಬ್​ಸೈಟ್​ಗೆ ತೆರಳಿ ನಿಮ್ಮ ನೆಚ್ಚಿನ ಆಟಗಾರರಿಗೆ ಓಟ್ ಮಾಡಿ.

5 / 5
Follow us
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ

Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ