ಮೆಲ್ಬೋರ್ನ್ ಟೆಸ್ಟ್ ಸೋತರೂ ಜಸ್ಪ್ರೀತ್ ಬುಮ್ರಾಗೆ ವಿಶೇಷ ಉಡುಗೊರೆ ನೀಡಿದ ಐಸಿಸಿ
Jasprit Bumrah: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಐಸಿಸಿ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅವರನ್ನು ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಈ ವರ್ಷ 71 ವಿಕೆಟ್ ಪಡೆದಿರುವ ಬುಮ್ರಾ 2024ರಲ್ಲಿ ಅಧಿಕ ವಿಕೆಟ್ ಪಡೆದ ವಿಶ್ವದ ಅಗ್ರ ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.
1 / 7
ವಿಶ್ವದ ನಂಬರ್ 1 ಟೆಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಮೆಲ್ಬೋರ್ನ್ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಎಂದಿನಂತೆ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದರು. ವಾಸ್ತವವಾಗಿ ಇಡೀ ಸರಣಿಯಲ್ಲಿ ಭಾರತದ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಏಕೈಕ ಆಟಗಾರನೆಂದರೆ ಅದು ಜಸ್ಪ್ರಿತ್ ಬುಮ್ರಾ. ಅವರನ್ನು ಹೊರತುಪಡಿಸಿ ತಂಡದ ಮತ್ತ್ಯಾವ ಆಟಗಾರನಿಗೂ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
2 / 7
ಮೆಲ್ಬೋರ್ನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದ ಬುಮ್ರಾ ಎರಡನೇ ಇನ್ನಿಂಗ್ಸ್‌ನಲ್ಲಿಯೂ 5 ವಿಕೆಟ್ಗಳ ಗೊಂಚಲು ಪಡೆದರು. ಆದರೆ, ಎಷ್ಟೇ ಪ್ರಯತ್ನಪಟ್ಟರೂ ಟೀಂ ಇಂಡಿಯಾವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಆದರೆ ಪಂದ್ಯ ಸೋತ ಬಳಿಕ ಐಸಿಸಿಯಿಂದ ಜಸ್ಪ್ರೀತ್ ಬುಮ್ರಾಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
3 / 7
ಅದೆನೆಂದರೆ ಜಸ್ಪ್ರೀತ್ ಬುಮ್ರಾ ಅವರನ್ನು ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ವಾಸ್ತವವಾಗಿ 2024ರಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರ ಪ್ರದರ್ಶನ ತೀರಾ ಕಳಪೆಯಾಗಿತ್ತು. ಮತ್ತೊಂದೆಡೆ, ಜಸ್ಪ್ರೀತ್ ಬುಮ್ರಾ ಈ ವರ್ಷ ಒಂದರ ನಂತರ ಒಂದರಂತೆ ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ವರ್ಷ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ.
4 / 7
ಈ ಕಾರಣದಿಂದಾಗಿ, ಅವರು ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗನಿಗೆ ನಾಮನಿರ್ದೇಶನಗೊಂಡಿದ್ದಾರೆ. ಇವರಲ್ಲದೆ ಇಂಗ್ಲೆಂಡ್‌ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಮತ್ತು ಶ್ರೀಲಂಕಾದ ಕಮಿಂದು ಮೆಂಡಿಸ್ ಕೂಡ ಈ ಪಟ್ಟಿಯಲ್ಲಿದ್ದಾರೆ. ಆದಾಗ್ಯೂ, ಬುಮ್ರಾ ಅವರ ಅತ್ಯುತ್ತಮ ದಾಖಲೆ ಮತ್ತು ಪ್ರದರ್ಶನವನ್ನು ಪರಿಗಣಿಸಿ, ಅವರು 2024 ರ ಐಸಿಸಿಯ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಬಾಚಿಕೊಳ್ಳುವ ಸಾಧ್ಯತೆಗಳಿವೆ.
5 / 7
2024 ರಲ್ಲಿ ಜಸ್ಪ್ರೀತ್ ಬುಮ್ರಾ ಮುಟ್ಟಿದ್ದೇಲ್ಲ ಚಿನ್ನವಾಗಿದೆ. ಈ ವರ್ಷ ಆಡಿರುವ 13 ಟೆಸ್ಟ್ ಪಂದ್ಯಗಳಲ್ಲಿ ಬುಮ್ರಾ ಒಟ್ಟು 71 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಮೂಲಕ ಈ ವರ್ಷ ಭಾರತ ಮಾತ್ರವಲ್ಲದೆ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಲ್ಲದೆ ಅವರ ಸರಾಸರಿ ಕೂಡ 15 (14.92) ಕ್ಕಿಂತ ಕಡಿಮೆ ಇದೆ.
6 / 7
ಮೆಲ್ಬೋರ್ನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಜಸ್ಪ್ರೀತ್ ಬುಮ್ರಾ 2024 ರ ವರ್ಷವನ್ನು ಅದ್ಭುತವಾಗಿ ಕೊನೆಗೊಳಿಸಿದರು. ಇದೀಗ ಬುಮ್ರಾ ಮತ್ತು ಟೀಂ ಇಂಡಿಯಾ ಮುಂದಿನ ವರ್ಷ ಜನವರಿ 3 ರಂದು ಮೈದಾನಕ್ಕಿಳಿಯಲಿದೆ.
7 / 7
ಇದಕ್ಕೂ ಮುನ್ನ ಜಸ್ಪ್ರೀತ್ ಮೆಲ್ಬೋರ್ನ್ ಟೆಸ್ಟ್‌ನಲ್ಲಿ ದೊಡ್ಡ ದಾಖಲೆ ಮಾಡಿದ್ದು, ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಶೋಯೆಬ್ ಅಖ್ತರ್ ಟೆಸ್ಟ್‌ನಲ್ಲಿ 12 ಬಾರಿ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದರು. ಆದರೀಗ ಬುಮ್ರಾ 13ನೇ ಬಾರಿಗೆ ಐದು ವಿಕೆಟ್ ಪಡೆದು ಅಖ್ತರ್ ದಾಖಲೆಯನ್ನು ಪುಡಿಗಟ್ಟಿದ್ದಾರೆ.