AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗರೂ ನಾಡಿನಲ್ಲಿ ಇತಿಹಾಸ ನಿರ್ಮಿಸಿದ ಬೂಮ್ ಬೂಮ್ ಬುಮ್ರಾ

Australia vs India: ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಆಲೌಟ್ ಆಗಿದೆ. ಇದೀಗ 105 ರನ್​ಗಳ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡ ದ್ವಿತೀಯ ಇನಿಂಗ್ಸ್ ಆಡುತ್ತಿದೆ.

ಝಾಹಿರ್ ಯೂಸುಫ್
|

Updated on: Dec 29, 2024 | 12:29 PM

Share
ಆಸ್ಟ್ರೇಲಿಯಾದಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಬೆಂಕಿ ಬೌಲಿಂಗ್ ಮುಂದುವರೆದಿದೆ. ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸಿದ್ದ ಬುಮ್ರಾ, ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ವಿಕೆಟ್ ಉರುಳಿಸಿದ್ದರು. ಇನ್ನು ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದ್ದರು.

1 / 5
ಇದೀಗ ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ಹಾಗೂ ದ್ವಿತೀಯ ಇನಿಂಗ್ಸ್​ನಲ್ಲಿ 4* ವಿಕೆಟ್ ಪಡೆದಿದ್ದಾರೆ. ಈ ಮೂಲಕ 4 ಪಂದ್ಯಗಳಿಂದ ಒಟ್ಟು 29 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಂದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸೀಸ್ ವೇಗಿ ಬೆನ್ ಹಿಲ್ಫೆನ್ಹಾಸ್ ಹೆಸರಿನಲ್ಲಿತ್ತು.

3 / 5
2011-12 ರ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 4 ಪಂದ್ಯಗಳಲ್ಲಿ 1008 ಎಸೆತಗಳನ್ನು ಎಸೆದು ಬೆನ್ ಹಿಲ್ಫೆನ್ಹಾಸ್ ಒಟ್ಟು 27 ವಿಕೆಟ್ ಕಬಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ಪಿಚ್​ನಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದರು.

4 / 5
ಇದೀಗ 12 ವರ್ಷಗಳ ಈ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಈ ಬಾರಿಯ ಸರಣಿಯಲ್ಲಿ 4 ಪಂದ್ಯಗಳಲ್ಲಿ 778* ಎಸೆತಗಳನ್ನು ಎಸೆದಿರುವ ಬುಮ್ರಾ 29* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕಾಂಗರೂನಾಡಿನಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ