ಕಾಂಗರೂ ನಾಡಿನಲ್ಲಿ ಇತಿಹಾಸ ನಿರ್ಮಿಸಿದ ಬೂಮ್ ಬೂಮ್ ಬುಮ್ರಾ
Australia vs India: ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 369 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 105 ರನ್ಗಳ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡ ದ್ವಿತೀಯ ಇನಿಂಗ್ಸ್ ಆಡುತ್ತಿದೆ.
1 / 5
ಆಸ್ಟ್ರೇಲಿಯಾದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಬೆಂಕಿ ಬೌಲಿಂಗ್ ಮುಂದುವರೆದಿದೆ. ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸಿದ್ದ ಬುಮ್ರಾ, ಅಡಿಲೇಡ್ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ವಿಕೆಟ್ ಉರುಳಿಸಿದ್ದರು. ಇನ್ನು ಬ್ರಿಸ್ಬೇನ್ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದ್ದರು.
2 / 5
ಇದೀಗ ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 4 ಹಾಗೂ ದ್ವಿತೀಯ ಇನಿಂಗ್ಸ್ನಲ್ಲಿ 4* ವಿಕೆಟ್ ಪಡೆದಿದ್ದಾರೆ. ಈ ಮೂಲಕ 4 ಪಂದ್ಯಗಳಿಂದ ಒಟ್ಟು 29 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.
3 / 5
ಅಂದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಜಸ್ಪ್ರೀತ್ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸೀಸ್ ವೇಗಿ ಬೆನ್ ಹಿಲ್ಫೆನ್ಹಾಸ್ ಹೆಸರಿನಲ್ಲಿತ್ತು.
4 / 5
2011-12 ರ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 4 ಪಂದ್ಯಗಳಲ್ಲಿ 1008 ಎಸೆತಗಳನ್ನು ಎಸೆದು ಬೆನ್ ಹಿಲ್ಫೆನ್ಹಾಸ್ ಒಟ್ಟು 27 ವಿಕೆಟ್ ಕಬಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ಪಿಚ್ನಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದರು.
5 / 5
ಇದೀಗ 12 ವರ್ಷಗಳ ಈ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಈ ಬಾರಿಯ ಸರಣಿಯಲ್ಲಿ 4 ಪಂದ್ಯಗಳಲ್ಲಿ 778* ಎಸೆತಗಳನ್ನು ಎಸೆದಿರುವ ಬುಮ್ರಾ 29* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕಾಂಗರೂನಾಡಿನಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.