AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬರೋಬ್ಬರಿ 3 ವರ್ಷಗಳ ಬಳಿಕ ಏಕದಿನ ಕ್ರಿಕೆಟ್​ಗೆ ಮರಳಿದ ಯಾರ್ಕರ್ ಕಿಂಗ್

India vs England ODI Series: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. 2027ರ ಏಕದಿನ ವಿಶ್ವಕಪ್‌ ಸಿದ್ಧತೆಗೆ ಇದು ಮೊದಲ ಹೆಜ್ಜೆ. ಮೂರು ವರ್ಷಗಳ ನಂತರ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದು, ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳಿಗೆ ನಿದ್ರೆ ಕದಡಿದ್ದಾರೆ. ಅವರ ಪ್ರಭಾವಿ ದಾಖಲೆ ಭಾರತದ ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದೆ.

ಪೃಥ್ವಿಶಂಕರ
|

Updated on: Jun 21, 2026 | 9:51 PM

Share
ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಜುಲೈ 14 ರಿಂದ ಪ್ರಾರಂಭವಾಗುವ ಈ ಸರಣಿಗೆ ಬಿಸಿಸಿಐ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಈ ಪ್ರವಾಸದೊಂದಿಗೆ ಟೀಂ ಇಂಡಿಯಾದ 2027 ರ ಏಕದಿನ ವಿಶ್ವಕಪ್‌ ತಯಾರಿಯೂ ಪ್ರಾರಂಭವಾಗಲಿದೆ. ಹೀಗಾಗಿ ಈ ಪ್ರವಾಸಕ್ಕೆ ತಂಡದ ಎಲ್ಲಾ ಸ್ಟಾರ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ (PC-PTI).

1 / 6
ಆ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಸೇರಿದ್ದು, ಸುಮಾರು ಮೂರು ವರ್ಷಗಳ ನಂತರ ಬುಮ್ರಾ ಏಕದಿನ ಕ್ರಿಕೆಟ್‌ಗೆ ಮರಳಲಿದ್ದಾರೆ. ಕೊನೆಯ ಬಾರಿಗೆ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಬುಮ್ರಾ ಆಡಿದ್ದರು, ಆ ಪಂದ್ಯದಲ್ಲಿ ಭಾರತ ಸೋತಿತ್ತು (PC-PTI).

2 / 6
ಅಂದಿನಿಂದ, ಬಿಸಿಸಿಐ ಆಯ್ಕೆ ಸಮಿತಿಯು ಬುಮ್ರಾ ಅವರ ಕೆಲಸದ ಹೊರೆಯನ್ನು ನಿರ್ವಹಿಸಲು ಮತ್ತು ಅವರನ್ನು ಸಂಪೂರ್ಣವಾಗಿ ಫಿಟ್ ಆಗಿಡಲು ಈ ಸ್ವರೂಪದಿಂದ ವಿಶ್ರಾಂತಿ ನೀಡಿತ್ತು. ಈಗ, ಸಂಪೂರ್ಣವಾಗಿ ರಿಫ್ರೆಶ್ ಆಗಿರುವ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ 2027 ರ ಏಕದಿನ ವಿಶ್ವಕಪ್​ಗೆ ಬಲಿಷ್ಠ ಬೌಲಿಂಗ್ ವಿಭಾಗವನ್ನು ಕಟ್ಟಲು ನೆರವಾಗಲಿದ್ದಾರೆ (PC-PTI).

3 / 6
ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರ್ಪಡೆಯಾಗಿರುವುದು ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳ ನಿದ್ರೆಗೆಡಿಸಿದೆ. ಏಕೆಂದರೆ ಇಂಗ್ಲೆಂಡ್ ತಂಡದ ವಿರುದ್ಧ ಬುಮ್ರಾ ಅವರ ದಾಖಲೆ ಅಮೋಘವಾಗಿದೆ. ಬುಮ್ರಾ ಇದುವರೆಗೆ ಇಂಗ್ಲೆಂಡ್ ವಿರುದ್ಧ ಏಳು ಏಕದಿನ ಪಂದ್ಯಗಳನ್ನು ಆಡಿದ್ದು, 5.88 ರ ಎಕಾನಮಿಯಲ್ಲಿ 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ (PC-PTI).

4 / 6
ಇದರಲ್ಲಿ ಬುಮ್ರಾ ಒಂದು ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ ಸಾಧನೆಯನ್ನು ಸಹ ಮಾಡಿದ್ದಾರೆ. ಇನ್ನು ಇಂಗ್ಲಿಷ್ ಪಿಚ್‌ಗಳ ವಿಷಯಕ್ಕೆ ಬಂದರೆ, ಬುಮ್ರಾ ಇನ್ನಷ್ಟು ಅಪಾಯಕಾರಿಯಾಗಿರುವುದು ಸಾಭೀತಾಗಿದೆ. ಇಲ್ಲಿಯವರೆಗೆ ಇಂಗ್ಲೆಂಡ್​ನಲ್ಲಿ 16 ಏಕದಿನ ಪಂದ್ಯಗಳನ್ನಾಡಿರುವ ಬುಮ್ರಾ ಕೇವಲ 4.52 ರ ಎಕಾನಮಿ ದರದಲ್ಲಿ 30 ವಿಕೆಟ್‌ಗಳನ್ನು ಕಬಳಿಸಿದ್ದಾರೆ (PC-PTI).

5 / 6
ಇಂಗ್ಲೆಂಡ್ ಸರಣಿಗೆ ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್ (PC-PTI).

6 / 6
Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!

ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?

ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್

ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ