
ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಜುಲೈ 14 ರಿಂದ ಪ್ರಾರಂಭವಾಗುವ ಈ ಸರಣಿಗೆ ಬಿಸಿಸಿಐ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಈ ಪ್ರವಾಸದೊಂದಿಗೆ ಟೀಂ ಇಂಡಿಯಾದ 2027 ರ ಏಕದಿನ ವಿಶ್ವಕಪ್ ತಯಾರಿಯೂ ಪ್ರಾರಂಭವಾಗಲಿದೆ. ಹೀಗಾಗಿ ಈ ಪ್ರವಾಸಕ್ಕೆ ತಂಡದ ಎಲ್ಲಾ ಸ್ಟಾರ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ (PC-PTI).

ಆ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಸೇರಿದ್ದು, ಸುಮಾರು ಮೂರು ವರ್ಷಗಳ ನಂತರ ಬುಮ್ರಾ ಏಕದಿನ ಕ್ರಿಕೆಟ್‌ಗೆ ಮರಳಲಿದ್ದಾರೆ. ಕೊನೆಯ ಬಾರಿಗೆ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಬುಮ್ರಾ ಆಡಿದ್ದರು, ಆ ಪಂದ್ಯದಲ್ಲಿ ಭಾರತ ಸೋತಿತ್ತು (PC-PTI).

ಅಂದಿನಿಂದ, ಬಿಸಿಸಿಐ ಆಯ್ಕೆ ಸಮಿತಿಯು ಬುಮ್ರಾ ಅವರ ಕೆಲಸದ ಹೊರೆಯನ್ನು ನಿರ್ವಹಿಸಲು ಮತ್ತು ಅವರನ್ನು ಸಂಪೂರ್ಣವಾಗಿ ಫಿಟ್ ಆಗಿಡಲು ಈ ಸ್ವರೂಪದಿಂದ ವಿಶ್ರಾಂತಿ ನೀಡಿತ್ತು. ಈಗ, ಸಂಪೂರ್ಣವಾಗಿ ರಿಫ್ರೆಶ್ ಆಗಿರುವ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ 2027 ರ ಏಕದಿನ ವಿಶ್ವಕಪ್ಗೆ ಬಲಿಷ್ಠ ಬೌಲಿಂಗ್ ವಿಭಾಗವನ್ನು ಕಟ್ಟಲು ನೆರವಾಗಲಿದ್ದಾರೆ (PC-PTI).

ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರ್ಪಡೆಯಾಗಿರುವುದು ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳ ನಿದ್ರೆಗೆಡಿಸಿದೆ. ಏಕೆಂದರೆ ಇಂಗ್ಲೆಂಡ್ ತಂಡದ ವಿರುದ್ಧ ಬುಮ್ರಾ ಅವರ ದಾಖಲೆ ಅಮೋಘವಾಗಿದೆ. ಬುಮ್ರಾ ಇದುವರೆಗೆ ಇಂಗ್ಲೆಂಡ್ ವಿರುದ್ಧ ಏಳು ಏಕದಿನ ಪಂದ್ಯಗಳನ್ನು ಆಡಿದ್ದು, 5.88 ರ ಎಕಾನಮಿಯಲ್ಲಿ 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ (PC-PTI).

ಇದರಲ್ಲಿ ಬುಮ್ರಾ ಒಂದು ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ ಸಾಧನೆಯನ್ನು ಸಹ ಮಾಡಿದ್ದಾರೆ. ಇನ್ನು ಇಂಗ್ಲಿಷ್ ಪಿಚ್‌ಗಳ ವಿಷಯಕ್ಕೆ ಬಂದರೆ, ಬುಮ್ರಾ ಇನ್ನಷ್ಟು ಅಪಾಯಕಾರಿಯಾಗಿರುವುದು ಸಾಭೀತಾಗಿದೆ. ಇಲ್ಲಿಯವರೆಗೆ ಇಂಗ್ಲೆಂಡ್ನಲ್ಲಿ 16 ಏಕದಿನ ಪಂದ್ಯಗಳನ್ನಾಡಿರುವ ಬುಮ್ರಾ ಕೇವಲ 4.52 ರ ಎಕಾನಮಿ ದರದಲ್ಲಿ 30 ವಿಕೆಟ್‌ಗಳನ್ನು ಕಬಳಿಸಿದ್ದಾರೆ (PC-PTI).

ಇಂಗ್ಲೆಂಡ್ ಸರಣಿಗೆ ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್ (PC-PTI).