ಟೀಮ್ ಇಂಡಿಯಾಗೆ ಬಿಗ್ ಶಾಕ್: ಚಾಂಪಿಯನ್ಸ್ ಟ್ರೋಫಿಯಿಂದ ಜಸ್​ಪ್ರೀತ್ ಬುಮ್ರಾ ಔಟ್

|

Updated on: Feb 12, 2025 | 7:38 AM

Jasprit Bumrah Ruled Out: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಕೊನೆಯ ಇನಿಂಗ್ಸ್​ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಈ ಬಾರಿಯ ಐಸಿಸಿ ಟೂರ್ನಿಯಲ್ಲಿ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ.

1 / 5
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

2 / 5
ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

3 / 5
ಇತ್ತ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ವೇಗಿಗಳಾಗಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಹಾಗೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

4 / 5
ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಫೆಬ್ರವರಿ 15 ರಂದು ದುಬೈಗೆ ತೆರಳಲಿದೆ. ಏಕೆಂದರೆ ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ಜರುಗಲಿದ್ದು, ಟೀಮ್ ಇಂಡಿಯಾ ಮ್ಯಾಚ್​ಗಳಿಗೆ ದುಬೈ ಆತಿಥ್ಯವಹಿಸಲಿದೆ.

5 / 5
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.