- Kannada News Photo gallery Cricket photos Jasprit Bumrah Ruled Out of IPL, No comeback in next 6 months
Jasprit Bumrah: ಟೀಮ್ ಇಂಡಿಯಾದಿಂದ ಜಸ್ಪ್ರೀತ್ ಬುಮ್ರಾರನ್ನು 6 ತಿಂಗಳುಗಳ ಕಾಲ ಮರೆತುಬಿಡಿ..!
Jasprit Bumrah: ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ
Updated on: Mar 01, 2023 | 10:10 PM

ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಸೀಸನ್ 16 ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

ಕಳೆದ ವರ್ಷ ನಡೆದ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಅಥವಾ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

ಆದರೆ ಬೆನ್ನು ನೋವಿನ ಸಮಸ್ಯೆಯಿಂದ ಗುಣಮುಖರಾಗದ ಬುಮ್ರಾ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಸಹ ಹಿಂದೆ ಸರಿಯಲಿದ್ದಾರೆ. ಏಕೆಂದರೆ....

ಜಸ್ಪ್ರೀತ್ ಬುಮ್ರಾ ತಮ್ಮ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಅವರು 6 ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಅಂದರೆ ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಐದಾರು ತಿಂಗಳುಗಳ ಕಾಲ ಬುಮ್ರಾ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸುವುದಿಲ್ಲ ಎಂಬುದು ಕೂಡ ಕನ್ಫರ್ಮ್ ಆಗಿದೆ.

ಜಸ್ಪ್ರೀತ್ ಬುಮ್ರಾ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಆಡಿದ್ದು ಸೆಪ್ಟೆಂಬರ್ 2022 ರಲ್ಲಿ. ಇದೀಗ ಮತ್ತೆ 6 ತಿಂಗಳುಗಳ ಕಾಲ ತಂಡದಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್ ವೇಳೆ ಯಾರ್ಕರ್ ಮಾಂತ್ರಿಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.
