Jasprit Bumrah: ಟೀಮ್ ಇಂಡಿಯಾದಿಂದ ಜಸ್​ಪ್ರೀತ್​ ಬುಮ್ರಾರನ್ನು 6 ತಿಂಗಳುಗಳ ಕಾಲ ಮರೆತುಬಿಡಿ..!

| Updated By: ಝಾಹಿರ್ ಯೂಸುಫ್

Updated on: Mar 01, 2023 | 10:10 PM

Jasprit Bumrah: ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ

1 / 6
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐಪಿಎಲ್ ಸೀಸನ್​ 16 ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

2 / 6
ಕಳೆದ ವರ್ಷ ನಡೆದ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಅಥವಾ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

3 / 6
ಆದರೆ ಬೆನ್ನು ನೋವಿನ ಸಮಸ್ಯೆಯಿಂದ ಗುಣಮುಖರಾಗದ ಬುಮ್ರಾ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಸಹ ಹಿಂದೆ ಸರಿಯಲಿದ್ದಾರೆ. ಏಕೆಂದರೆ....

4 / 6
ಜಸ್​ಪ್ರೀತ್ ಬುಮ್ರಾ ತಮ್ಮ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಅವರು 6 ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

5 / 6
ಅಂದರೆ ಜಸ್​ಪ್ರೀತ್ ಬುಮ್ರಾ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಅಕ್ಟೋಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಐದಾರು ತಿಂಗಳುಗಳ ಕಾಲ ಬುಮ್ರಾ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸುವುದಿಲ್ಲ ಎಂಬುದು ಕೂಡ ಕನ್​ಫರ್ಮ್ ಆಗಿದೆ.

6 / 6
ಜಸ್​ಪ್ರೀತ್ ಬುಮ್ರಾ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಆಡಿದ್ದು ಸೆಪ್ಟೆಂಬರ್ 2022 ರಲ್ಲಿ. ಇದೀಗ ಮತ್ತೆ 6 ತಿಂಗಳುಗಳ ಕಾಲ ತಂಡದಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್​ ವೇಳೆ ಯಾರ್ಕರ್ ಮಾಂತ್ರಿಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.