AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards: ಐಸಿಸಿ ಪ್ರಶಸ್ತಿಗೆ ಬುಮ್ರಾ, ಸ್ಯಾಮ್ಸನ್ ನಡುವೆ ಪೈಪೋಟಿ

ICC Player of the Month March: ಐಸಿಸಿ ಮಾರ್ಚ್ ತಿಂಗಳ ಆಟಗಾರ ಪ್ರಶಸ್ತಿಗೆ ಭಾರತದ ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ನಾಮನಿರ್ದೇಶನಗೊಂಡಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕಾರಣ ಇಬ್ಬರೂ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಕಾನರ್ ಈಸ್ಟರ್‌ಹ್ಯೂಗೆನ್ ಸಹ ಈ ಪಟ್ಟಿಯಲ್ಲಿದ್ದಾರೆ. 2025ರ ಟಿ20 ವಿಶ್ವಕಪ್‌ನಲ್ಲಿ ಸ್ಯಾಮ್ಸನ್ 'ಟೂರ್ನಮೆಂಟ್ ಆಟಗಾರ' ಆಗಿದ್ದರೆ, ಬುಮ್ರಾ 14 ವಿಕೆಟ್ ಪಡೆದು ಮಿಂಚಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನದಿಂದ ಈ ಪ್ರಶಸ್ತಿ ಗೆಲ್ಲುವ ಸಾಧ್ಯತೆ ಇದೆ.

ಪೃಥ್ವಿಶಂಕರ
|

Updated on: Apr 06, 2026 | 3:49 PM

Share
ಐಪಿಎಲ್ 2026 ರ ಸಂಭ್ರಮದ ನಡುವೆ , ಐಸಿಸಿ ಮಾರ್ಚ್ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದು, ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾನರ್ ಈಸ್ಟರ್‌ಹ್ಯೂಗೆನ್ ಕೂಡ ಈ ಪ್ರಶಸ್ತಿಗೆ ಮೂರನೇ ನಾಮನಿರ್ದೇಶಿತರಾಗಿದ್ದಾರೆ.

1 / 6
ಬುಮ್ರಾ ಮತ್ತು ಸ್ಯಾಮ್ಸನ್, 2026 ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರ ಪ್ರದರ್ಶನದ ಆಧಾರದ ಮೇಲೆ ಮಾರ್ಚ್ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿನ ಪ್ರದರ್ಶನದಿಂದಾಗಿ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅವರನ್ನು ನಾಮನಿರ್ದೇಶಿತರ ಪಟ್ಟಿಯಲ್ಲಿ ಸೇರಿಸಲಾಗಿದೆ.

2 / 6
2025 ರ ಟಿ20 ವಿಶ್ವಕಪ್‌ನಲ್ಲಿ ನೀಡಿದ ಅಮೋಘ ಪ್ರದರ್ಶನಕ್ಕೆ ಸಂಜು ಸ್ಯಾಮ್ಸನ್ ಟೂರ್ನಮೆಂಟ್‌ ಆಟಗಾರ ಪ್ರಶಸ್ತಿಯೂ ಲಭಿಸಿತ್ತು . ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಅವರು ಅಜೇಯ 97ರನ್, ನಂತರ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ 89 ರನ್‌ ಆ ನಂತರ ನಡೆದ ಫೈನಲ್‌ನಲ್ಲಿಯೂ ಸಹ ಉತ್ತಮ ಪ್ರದರ್ಶನ ನೀಡಿದರು.

3 / 6
ಸಂಜು ಸ್ಯಾಮ್ಸನ್ ಈ ನಿರ್ಣಾಯಕ ಮೂರು ಪಂದ್ಯಗಳಲ್ಲಿ 199.27 ಸ್ಟ್ರೈಕ್ ರೇಟ್‌ನಲ್ಲಿ 275 ರನ್ ಕಲೆಹಾಕಿದ್ದರು. ಅಲ್ಲದೆ ಸತತ ಮೂರು ಪಂದ್ಯಗಳಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಇದರ ಜೊತೆಗೆ ಐಸಿಸಿ ಟಿ20ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ 20 ರಲ್ಲಿ ಸ್ಥಾನ ಪಡೆದರು.

4 / 6
2026 ರ ಟಿ20ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ ಆಡಿದ 8 ಪಂದ್ಯಗಳಲ್ಲಿ 12.42 ರ ಸರಾಸರಿಯಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದರು. 15 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿದ್ದರೆ, ಅವರ ಎಕಾನಮಿ 6.21 ಆಗಿತ್ತು. ನ್ಯೂಜಿಲೆಂಡ್ ವಿರುದ್ಧ 4 ಓವರ್‌ಗಳಲ್ಲಿ 15 ರನ್‌ಗಳನ್ನು ಬಿಟ್ಟುಕೊಟ್ಟಿದ್ದ ಬುಮ್ರಾಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

5 / 6
ಇನ್ನು ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾನರ್ ಈಸ್ಟರ್‌ಹ್ಯೂಗೆನ್ ಇದುವರೆಗೆ ಕೇವಲ ಒಂದು ಟಿ20 ಸರಣಿಯನ್ನು ಮಾತ್ರ ಆಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಆ ಸರಣಿಯಲ್ಲಿ, ಅವರು ಅಡಿದ ಐದು ಪಂದ್ಯಗಳಲ್ಲಿ 145.98 ಸ್ಟ್ರೈಕ್ ರೇಟ್‌ನಲ್ಲಿ ಎರಡು ಅರ್ಧಶತಕಗಳು ಸೇರಿದಂತೆ 200 ರನ್ ಗಳಿಸಿದ್ದಾರೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ