AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟೆಸ್ಟ್​ಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ. ರಾಂಚಿಯಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅವರ ಬದಲಿಗೆ ಈ ಪಂದ್ಯದಲ್ಲಿ ಯುವ ಬೌಲರ್​ರೊಬ್ಬರು ಕಣಕ್ಕಿಳಿಯುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 19, 2024 | 9:57 AM

Share
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಹೈದಾರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ವಿಶಾಖಪಟ್ಟಣಂ ಹಾಗೂ ರಾಜ್​ಕೋಟ್​ನಲ್ಲಿ ನಡೆದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ.

1 / 6
ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ. ಸತತ ಪಂದ್ಯಗಳನ್ನಾಡಿ ಬಳಲಿರುವ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಸೂಚಿಸಿದೆ. ಹೀಗಾಗಿ ನಾಲ್ಕನೇ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ.

2 / 6
ಕಳೆದ ಮೂರು ವಾರಗಳಲ್ಲಿ ಜಸ್​ಪ್ರೀತ್ ಬುಮ್ರಾ  8.3, 16.1, 15.5, 17.2, 15 ಮತ್ತು 8 ಓವರ್‌ಗಳನ್ನು ಎಸೆದಿದ್ದಾರೆ. ಅಂದರೆ ಮೊಹಮ್ಮದ್ ಶಮಿಯ ಅನುಪಸ್ಥಿತಿ ನಡುವೆ ಬುಮ್ರಾ ಏಕಾಂಗಿಯಾಗಿ 80 ಓವರ್​ಗಳನ್ನು ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಬೌಲಿಂಗ್ ಲೈನಪ್ ಅನ್ನು ಮುನ್ನಡೆಸಿದ್ದಾರೆ.

3 / 6
ಹೀಗೆ ಸತತ ಪಂದ್ಯಗಳಿಂದ ಬಳಲಿರುವ ಜಸ್​ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವುದು ಅಗತ್ಯ. ಏಕೆಂದರೆ ಜೂನ್ 1 ರಿಂದ ಟಿ20 ವಿಶ್ವಕಪ್​ ಕೂಡ ಶುರುವಾಗಲಿದೆ. ಅದಕ್ಕೂ ಮುನ್ನ ಬುಮ್ರಾ ಅವರಿಗೆ ರೆಸ್ಟ್ ನೀಡಬೇಕಾದ ಅನಿವಾರ್ಯತೆಯನ್ನು ಬಿಸಿಸಿಐ ಮನಗಂಡಿದೆ. ಅದರಂತೆ ಫೆಬ್ರವರಿ 23 ರಿಂದ ಶುರುವಾಗಲಿರುವ ಮೂರನೇ ಪಂದ್ಯಕ್ಕೆ ಯಾರ್ಕರ್ ಕಿಂಗ್ ಅಲಭ್ಯರಾಗುವುದು ಬಹುತೇಕ ಖಚಿತ.

4 / 6
ಇನ್ನು ಮಾರ್ಚ್ 7 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಸರಣಿಯ ಅಂತಿಮ ಪಂದ್ಯದ ವೇಳೆಗೆ ಬುಮ್ರಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇತ್ತ ನಾಲ್ಕನೇ ಟೆಸ್ಟ್ ಪಂದ್ಯದಿಂದ ಜಸ್​ಪ್ರೀತ್ ಹೊರಗುಳಿದರೆ ಅವರ ಬದಲಿಗೆ ಮುಕೇಶ್ ಕುಮಾರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

5 / 6
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

6 / 6
Web contact
Web contact

TV9 Kannada

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ