ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.