ರನ್ ನೀಡದೆ ಓವರ್ ಮುಗಿಸುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಜಸ್ಪ್ರೀತ್ ಬುಮ್ರಾ

Updated on: Sep 15, 2026 | 8:52 PM

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಐತಿಹಾಸಿಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ ಮೊದಲ ಓವರ್‌ನಲ್ಲಿ ಮೇಡನ್ ಎಸೆದು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳ ಕ್ರಿಕೆಟಿಗರಲ್ಲಿ ಅತಿ ಹೆಚ್ಚು (13) ಅಂತರರಾಷ್ಟ್ರೀಯ ಟಿ20 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ ಕೀರ್ತಿಗೆ ಭಾಜನರಾದರು. ಈ ಮೂಲಕ ಜಿಂಬಾಬ್ವೆಯ ರಿಚರ್ಡ್ ನ್ಗಾರವಾ ಅವರ ದಾಖಲೆಯನ್ನು ಹಿಂದಿಕ್ಕಿ, ಟೀಂ ಇಂಡಿಯಾಕ್ಕೆ ಅದ್ಭುತ ಆರಂಭ ಒದಗಿಸಿದರು.

1 / 5
ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಬುಮ್ರಾ ಅದ್ಭುತ ಆರಂಭ ನೀಡಿದರು. ಪಂದ್ಯದ ಮೊದಲ ಓವರ್‌ನಲ್ಲೇ ಮೇಡನ್ ಓವರ್ ಎಸೆದ ಅವರು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ದಾಖಲೆ ನಿರ್ಮಿಸಿದರು(PC-PTI).

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಬುಮ್ರಾ ಅದ್ಭುತ ಆರಂಭ ನೀಡಿದರು. ಪಂದ್ಯದ ಮೊದಲ ಓವರ್‌ನಲ್ಲೇ ಮೇಡನ್ ಓವರ್ ಎಸೆದ ಅವರು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ದಾಖಲೆ ನಿರ್ಮಿಸಿದರು(PC-PTI).

2 / 5

ಅಲ್ಲದೆ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಇನ್ನಿಂಗ್ಸ್‌ನಲ್ಲಿ ಮೇಡನ್ ಓವರ್ ಬೌಲ್ ಮಾಡಿದ ಸಾಧನೆಯನ್ನು ಬುಮ್ರಾ ಮಾಡಿದರು. ಈ ಪಂದ್ಯದ ಮೊದಲ ಓವರ್‌ನಲ್ಲಿ, ಅಫ್ಘಾನಿಸ್ತಾನದ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ನಾಯಕ ಇಬ್ರಾಹಿಂ ಜದ್ರಾನ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ(PC-PTI).

3 / 5

ಇದರೊಂದಿಗೆ ಬುಮ್ರಾ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 13 ಮೇಡನ್ ಓವರ್‌ಗಳನ್ನು ಎಸೆದಿದ್ದಾರೆ. ಇದು ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಹೊಸ ವಿಶ್ವ ದಾಖಲೆಯಾಗಿದೆ. ಈ ಹಿಂದೆ 12 ಮೇಡನ್ ಓವರ್‌ಗಳನ್ನು ಎಸೆದಿದ್ದ ಜಿಂಬಾಬ್ವೆಯ ರಿಚರ್ಡ್ ನ್ಗಾರವಾ ಅವರೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಬುಮ್ರಾ ಇದೀಗ ಅವರನ್ನು ಹಿಂದಿಕ್ಕಿದ್ದಾರೆ(PC-PTI).

4 / 5

ಭಾರತ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ನ ಮೊದಲ ಓವರ್ ಮೇಡನ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಭುವಿ ಇದುವರೆಗೆ 6 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅರ್ಶ್‌ದೀಪ್ ಸಿಂಗ್ 2 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

5 / 5

ಉಳಿದಂತೆ ಹರ್ಭಜನ್ ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಆಶಿಶ್ ನೆಹ್ರಾ, ಪ್ರವೀಣ್ ಕುಮಾರ್, ಬರೀಂದರ್ ಸ್ರಾನ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 1 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us