Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಮೇಲೆ ಅಪನಂಬಿಕೆ: ಜಸ್​ಪ್ರೀತ್ ಬುಮ್ರಾಗೆ ನಾಯಕತ್ವ ನೀಡಲು ಪ್ಲ್ಯಾನ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಟೀಮ್ ಇಂಡಿಯಾದ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಹಿಟ್​ಮ್ಯಾನ್ ಚಾಂಪಿಯನ್ಸ್ ಟ್ರೋಫಿಯಲ್ಲೂ ವಿಫಲರಾದರೆ, ತಂಡದ ನಾಯಕ ಬದಲಾಗುವುದು ಖಚಿತ.

ಝಾಹಿರ್ ಯೂಸುಫ್
|

Updated on: Jan 06, 2025 | 1:20 PM

ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಲು ಜನವರಿ 12 ರವರೆಗೆ ಗಡುವು ನೀಡಲಾಗಿದೆ. ಇತ್ತ ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ತಂಡದ ನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಪರಿಗಣಿಸಲು ಚರ್ಚೆ ನಡೆಸಿದೆ.

1 / 5
ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್​. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದೇ ಚಿಂತೆ. ಒಂದು ವೇಳೆ ಈ ಟೂರ್ನಿಯಲ್ಲೂ ಅವರು ಕಳಪೆ ಪ್ರದರ್ಶನ ನೀಡಿದರೆ ನಾಯಕತ್ವ ಬದಲಾವಣೆ ಅನಿವಾರ್ಯ.

2 / 5
ಆದರೆ ಪ್ರಸ್ತುತ ಭಾರತ ಏಕದಿನ ತಂಡದ ಉಪನಾಯಕ ಶುಭ್​​ಮನ್​ ಗಿಲ್​ಗೆ ಅನುಭವದ ಕೊರತೆಯಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಉಪನಾಯಕನ ಸ್ಥಾನ ನೀಡದಿರಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ. ಬದಲಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ.

3 / 5
ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ, ಆಡುವ ಬಳಗದಿಂದ ಅವರನ್ನು ಕೈ ಬಿಟ್ಟು ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಬದಲಿಗೆ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

4 / 5
ಇನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದೆಲ್ಲಾ ಮ್ಯಾಚ್​​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್​ಗೆ ಪ್ರವೇಶಿಸಿ, ಅಂತಿಮ ಪಂದ್ಯ ಕೂಡ ದುಬೈನಲ್ಲೇ ಆಯೋಜನೆಗೊಳ್ಳಲಿದೆ.

5 / 5
Follow us
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ

ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ