ರೋಹಿತ್ ಶರ್ಮಾ ಮೇಲೆ ಅಪನಂಬಿಕೆ: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಲು ಪ್ಲ್ಯಾನ್
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಟೀಮ್ ಇಂಡಿಯಾದ ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್. ಆಸ್ಟ್ರೇಲಿಯಾ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಹಿಟ್ಮ್ಯಾನ್ ಚಾಂಪಿಯನ್ಸ್ ಟ್ರೋಫಿಯಲ್ಲೂ ವಿಫಲರಾದರೆ, ತಂಡದ ನಾಯಕ ಬದಲಾಗುವುದು ಖಚಿತ.
1 / 5
ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಲು ಜನವರಿ 12 ರವರೆಗೆ ಗಡುವು ನೀಡಲಾಗಿದೆ. ಇತ್ತ ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ತಂಡದ ನಾಯಕನಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ಪರಿಗಣಿಸಲು ಚರ್ಚೆ ನಡೆಸಿದೆ.
2 / 5
ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕಳಪೆ ಫಾರ್ಮ್. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದೇ ಚಿಂತೆ. ಒಂದು ವೇಳೆ ಈ ಟೂರ್ನಿಯಲ್ಲೂ ಅವರು ಕಳಪೆ ಪ್ರದರ್ಶನ ನೀಡಿದರೆ ನಾಯಕತ್ವ ಬದಲಾವಣೆ ಅನಿವಾರ್ಯ.
3 / 5
ಆದರೆ ಪ್ರಸ್ತುತ ಭಾರತ ಏಕದಿನ ತಂಡದ ಉಪನಾಯಕ ಶುಭ್ಮನ್ ಗಿಲ್ಗೆ ಅನುಭವದ ಕೊರತೆಯಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಉಪನಾಯಕನ ಸ್ಥಾನ ನೀಡದಿರಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ. ಬದಲಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ.
4 / 5
ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ, ಆಡುವ ಬಳಗದಿಂದ ಅವರನ್ನು ಕೈ ಬಿಟ್ಟು ಜಸ್ಪ್ರೀತ್ ಬುಮ್ರಾಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಬದಲಿಗೆ ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.
5 / 5
ಇನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದೆಲ್ಲಾ ಮ್ಯಾಚ್ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಒಂದು ವೇಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ಗೆ ಪ್ರವೇಶಿಸಿ, ಅಂತಿಮ ಪಂದ್ಯ ಕೂಡ ದುಬೈನಲ್ಲೇ ಆಯೋಜನೆಗೊಳ್ಳಲಿದೆ.