3ನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧಾರ
Jasprit Bumrah: ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ನೆಸ್ ಹೊಂದಿಲ್ಲದಿದ್ದರೂ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದೀಗ ಬಿಸಿಸಿಐ ಅವರ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ಅವರು ಮುಂದಿನ ತಿಂಗಳ 2ನೇ ವಾರದೊಳಗೆ ಫಿಟ್ನೆಸ್ ಸಾಧಿಸಿದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
1 / 5
ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಹೆಸರು ಕಾಣಿಸಿಕೊಂಡರೂ, ಅದಕ್ಕೂ ಮುನ್ನ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಅವರ ಹೆಸರಿಲ್ಲ.
2 / 5
ಅಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರ ಸ್ಥಾನದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕಣಕ್ಕಿಳಿಯಲಿದ್ದಾರೆ.
3 / 5
ಇದಾಗ್ಯೂ ಜಸ್ಪ್ರೀತ್ ಬುಮ್ರಾ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಫೆಬ್ರವರಿ 12 ರೊಳಗೆ ಅವರು ಫಿಟ್ನೆಸ್ ಸಾಧಿಸಿದರೆ ಅವರು ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನಾಡಲಿದ್ದಾರೆ. ಈ ಪಂದ್ಯದಲ್ಲಿ ಅವರು ಸಂಪೂರ್ಣ 10 ಓವರ್ಗಳನ್ನು ಎಸೆಯಲು ಸಮರ್ಥರಾದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
4 / 5
ಒಂದಾರ್ಥದಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವು ಜಸ್ಪ್ರೀತ್ ಬುಮ್ರಾ ಪಾಲಿಗೆ ಫಿಟ್ನೆಸ್ ಟೆಸ್ಟ್ ಪಂದ್ಯ ಎನ್ನಬಹುದು. ಈ ಮ್ಯಾಚ್ನಲ್ಲಿ ಬುಮ್ರಾ ಕಣಕ್ಕಿಳಿದು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಯಶಸ್ವಿಯಾದರೆ ಮಾತ್ರ ಅವರು ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಲಭ್ಯರಿರಲಿದ್ದಾರೆ.
5 / 5
ಇಲ್ಲದಿದ್ದರೆ, ಫೆಬ್ರವರಿ 20 ರಂದು ನಡೆಯಲಿರುವ ಬಾಂಗ್ಲಾದೇಶ್ ಮತ್ತು ಫೆಬ್ರವರಿ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಹೈವೊಲ್ಟೇಜ್ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯರಾಗುವುದು ಖಚಿತ. ಹೀಗಾಗಿಯೇ ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಸಿ ಜಸ್ಪ್ರೀತ್ ಬುಮ್ರಾ ಅವರ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧರಿಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ.