ಟೀಮ್ ಇಂಡಿಯಾದ ಮೂವರು ಸಂಪೂರ್ಣ ಫಿಟ್​!

Updated on: Sep 10, 2026 | 7:31 AM

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

1 / 5
ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೂ ಮುನ್ನ ಭಾರತ ತಂಡದ ಮೂವರು ಆಟಗಾರರು ಸಂಪೂರ್ಣ ಫಿಟ್​ನೆಸ್​ ಸಾಧಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಈ ಆಟಗಾರರು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನಲ್ಲಿ ನಡೆದ ಫಿಟ್ನೆಸ್​ ಪರೀಕ್ಷೆ ಮತ್ತು ಮ್ಯಾಚ್ ಸಿಮ್ಯುಲೇಶನ್‌ಗಳನ್ನು ಯಶಸ್ವಿಯಾಗಿ ಪಾಸ್ ಆಗಿದ್ದಾರೆ. ಹೀಗಾಗಿ ಈ ಮೂವರೂ ಆಟಗಾರರು ಅಫ್ಘಾನ್ ಸರಣಿಗೆ ಲಭ್ಯರಾಗಿದ್ದಾರೆ. ಫಿಟ್​ನೆಸ್ ಸಾಧಿಸಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ... (PC: BCCI)

2 / 5

ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿಯೇ ಅವರು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಅವರು ಅಫ್ಘಾನಿಸ್ತಾನ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. (PC: Getty Images)

3 / 5

ವಾಷಿಂಗ್ಟನ್ ಸುಂದರ್​: ಟೀಮ್ ಇಂಡಿಯಾ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ರನ್ನಿಂಗ್ ಮತ್ತು ಫೀಲ್ಡಿಂಗ್ ಮಾಡುವಾಗ ತೊಡೆಯ ಹಿಂಭಾಗದ ಸ್ನಾಯು ಸೆಳೆತಕ್ಕೆ ಒಳಗಾಗುತ್ತಿದ್ದರು. ಇದೀಗ ಈ ಸಮಸ್ಯೆಯಿಂದ ಸಂಪೂರ್ಣ ಗುಣಮುಖರಾಗಿದ್ದು, ಮುಂದಿನ ಸರಣಿಗೆ ಲಭ್ಯರಿರಲಿದ್ದಾರೆ. (PC: Getty Images)

4 / 5

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ಕ್ವಾಡ್ರಿಸೆಪ್ಸ್ (ತೊಡೆಯ ಮುಂಭಾಗದ ಸ್ನಾಯು) ಸಮಸ್ಯೆಯಿಂದ ಬಳಲುತ್ತಿದ್ದರು. ಇದು ಅವರ ಬೌಲಿಂಗ್ ರನ್-ಅಪ್ ಮತ್ತು ಬ್ಯಾಟಿಂಗ್ ವೇಳೆ ತೊಂದರೆ ನೀಡುತ್ತಿತ್ತು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ನಿತೀಶ್ ಕುಮಾರ್ ಮುಂಬರುವ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. (PC: Getty Images)

5 / 5

ಅಫ್ಘಾನಿಸ್ತಾನ್ ಸರಣಿಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ*, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ. (PC: Getty Images)

Loading...
Unable to load recommendations.
Follow Us